ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 30 : ತಾಲ್ಲೂಕು ಕಚೇರಿ ಹಿಂಭಾಗದಲ್ಲಿರುವ ಕಣಿವೆಮಾರಮ್ಮ ದೇವಸ್ಥಾನದ ಅವ್ಯವಹಾರ ವಿರುದ್ದ ತನಿಖೆ ನಡೆಸುವುದಕ್ಕಾಗಿ ನ.1 ರಂದು ಬೆಳಿಗ್ಗೆ 11 ಗಂಟೆಗೆ ಪ್ರವಾಸಿ ಮಂದಿರದಲ್ಲಿ ಕಣಿವೆ ಮಾರಮ್ಮ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯಿಂದ ತುರ್ತು ಸಭೆ ಕರೆಯಲಾಗಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಕಣಿವೆ ಮಾರಮ್ಮ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಸಂಚಾಲಕ
ಬಸವರಾಜ್ ವಿನಂತಿಸಿದ್ದಾರೆ.










