ಚಿತ್ರದುರ್ಗ, ನವೆಂಬರ್. 02 : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರದಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ, ನೂರಾರು ಕೋಟಿ ರೂಪಾಯಿ ವೆಚ್ಚದ ವಿವಿಧ ಜನಪರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಬಿ.ಎಸ್. ಶ್ರೀಧರ್ ಅವರು ಹೊರಡಿಸಿರುವ ಅಧಿಕೃತ ಪ್ರವಾಸ ಪಟ್ಟಿಯ ಪ್ರಕಾರ, ಮುಖ್ಯಮಂತ್ರಿಗಳ ಪ್ರವಾಸದ ವಿವರ ಇಂತಿದೆ.
ಬೆಳಿಗ್ಗೆ 10:00: ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗಕ್ಕೆ ಪ್ರಯಾಣ.
ಬೆಳಿಗ್ಗೆ 11:00: ಹಿರಿಯೂರು ನಗರದ ಹುಳಿಯಾರು ರಸ್ತೆಯಲ್ಲಿರುವ ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್ಗೆ ಆಗಮನ.
ಬೆಳಿಗ್ಗೆ 11:00: ಧರ್ಮಪುರದಲ್ಲಿ ನಿರ್ಮಾಣವಾಗಲಿರುವ ನೂತನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಹಾಗೂ ಇತರೆ ಕಾಮಗಾರಿಗಳ ಶಂಕುಸ್ಥಾಪನೆ.
ಮಧ್ಯಾಹ್ನ 12:30: ದಿಂಡಾವಾರ ಗ್ರಾಮದಲ್ಲಿ ಬಹುನಿರೀಕ್ಷಿತ 17 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶಂಕುಸ್ಥಾಪನೆ.
ಮಧ್ಯಾಹ್ನ 02:00: ಹಿರಿಯೂರು ನಗರದಲ್ಲಿ ಒಕ್ಕಲಿಗರ ಭವನ ನಿರ್ಮಾಣ ಕಾಮಗಾರಿ ಹಾಗೂ ಒಳಚರಂಡಿ (ಯುಜಿಡಿ) ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮಧ್ಯಾಹ್ನ 03:00: ಐಮಂಗಲದಲ್ಲಿ ಕೆರೆಗೆ ಗಂಗಾಪೂಜೆ ನೆರವೇರಿಸಲಿದ್ದು, ನಂತರ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ (VIJNL) ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ 53 ಕೆರೆಗಳಿಗೆ ನೀರು ತುಂಬಿಸುವ ಬೃಹತ್ ಯೋಜನೆಗೆ ಅಧಿಕೃತವಾಗಿ ಶಂಕುಸ್ಥಾಪನೆ ಮಾಡಲಿದ್ದಾರೆ.
ಸಂಜೆ 05:00: ಹಿರಿಯೂರಿನ ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್.

ಸಂಜೆ 06:00: ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ.












