Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುರಸು ಚಂಡಮಾರುತದ ಎಫೆಕ್ಟ್  : ರಾಜ್ಯದಲ್ಲಿ 5 ದಿನ ಮಳೆ ಮಳೆ ಸಾಧ್ಯತೆ!

---Advertisement---

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಮುರಸು’ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನಿಡಿದೆ.

ಪ್ರಸ್ತುತ ಈ ಚಂಡಮಾರುತವು ಚೆನ್ನೈ ಮತ್ತು ಒಂಗೋಲ್ ಕರಾವಳಿಯ ಸಮೀಪವಿದ್ದು, ಮತ್ತಷ್ಟು ತೀವ್ರಗೊಂಡು ನರಸಾಪುರ ಮತ್ತು ನೆಲ್ಲೂರು ನಡುವೆ ಗಂಟೆಗೆ ಸುಮಾರು 150 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಭೂಸ್ಪರ್ಶ ಮಾಡುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮೀನುಗಾರಿಕೆ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಆಂಧ್ರಪ್ರದೇಶಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಚಂಡಮಾರುತದ ಅಬ್ಬರ ಅಷ್ಟಾಗಿ ಇರುವುದಿಲ್ಲವಾದರೂ, ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಮಳೆ ಆರಂಭವಾಗಲಿದ್ದು, ನಂತರದ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

Join WhatsApp

Join Now

Join Telegram

Join Now