Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೀಪಾವಳಿ ಹಬ್ಬದ ಸಂಭ್ರಮ ಹೆಚ್ಚಿಸಿದ ಗ್ಯಾರಂಟಿ ; ಜಿಲ್ಲೆಯ ಗೃಹಲಕ್ಷ್ಮಿಯರಿಗೆ 3 ಕಂತಿನ ಹಣ ಬಿಡುಗಡೆ

---Advertisement---

ಚಿತ್ರದುರ್ಗ.ನ.04: ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 2026-27ನೇ ಸಾಲಿನ ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ಸೇರಿದಂತೆ ಒಟ್ಟು ಮೂರು ಕಂತುಗಳ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಗಂಜಿಗಟ್ಟೆ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡಿರುವ 3,80,363 ಫಲಾನುಭವಿಗಳಿಗೆ 34, 35 ಹಾಗೂ 36ನೇ ಕಂತಿನ ಹಣ ಬಿಡುಗಡೆಯಾಗುತ್ತಿದೆ. ಪ್ರತಿ ತಿಂಗಳಿಗೆ ರೂ. ರೂ. 76.07 ಕೋಟಿ ವೆಚ್ಚವಾಗಲಿದ್ದು, ಮೂರು ತಿಂಗಳ ರೂ.228.17 ಕೋಟಿ ಮೊತ್ತವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ ಎಂದರು.

ಬರಗಾಲದ ಭೀತಿಯಿಂದಾಗಿ ಸಂಕಷ್ಟದಲ್ಲಿದ್ದ ಜಿಲ್ಲೆಯ ಜನತೆಗೆ ಹಬ್ಬ ಆಚರಿಸಲು ಈ ಹಣ ಆಸರೆಯಾಗಲಿದೆ. ಮೂರು ಕಂತುಗಳ ಒಟ್ಟು ಮೊತ್ತವಾಗಿ ಪ್ರತಿ ಫಲಾನುಭವಿಗೆ ರೂ. 6,000 ಸಿಗಲಿದೆ. ಇಂದಿನಿಂದಲೇ ಹಣ ಜಮೆಯಾಗುವ ಪ್ರಕ್ರಿಯೆ ಆರಂಭಗೊಂಡಿದ್ದು, ಶೀಘ್ರದಲ್ಲಿಯೇ ಎಲ್ಲಾ ಅರ್ಹ ಫಲಾನುಭವಿಗಳ ಖಾತೆಗೆ ಮೊತ್ತ ತಲುಪಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಗಂಜಿಗಟ್ಟೆ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now