Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿಂಕ್ ಟ್ರಂಪೆಟ್ ಟ್ರೀ ಸಸಿಗಳ ನೆಡುವ ಕಾರ್ಯಕ್ರಮಕ್ಕೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಚಾಲನೆ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 04 : ಕೋಟೆನಾಡು ಚಿತ್ರದುರ್ಗ ನಗರದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸುವ ಹಾಗೂ ಹಸಿರು ಪರಿಸರ ನಿರ್ಮಿಸುವ ಉದ್ದೇಶದಿಂದ ಪಪ್ಪಿಸ್ ಸ್ಟೂಡೆಂಟ್ ವಿಂಗ್ ವತಿಯಿಂದ ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ ಪಿಂಕ್ ಟ್ರಂಪೆಟ್ ಟ್ರೀ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಬೆಂಗಳೂರು ನಗರದ ಮಾದರಿಯಲ್ಲಿ ಚಿತ್ರದುರ್ಗ ನಗರವನ್ನೂ ಹಸಿರುಮಯವಾಗಿ ಹಾಗೂ ಸುಂದರವಾಗಿ ರೂಪಿಸುವ ಆಶಯದೊಂದಿಗೆ ಈ ವಿಶೇಷ ಸಸಿ ನೆಡುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಗರದ ಪ್ರಮುಖ ರಸ್ತೆಗಳು, ಸಾರ್ವಜನಿಕ ಸ್ಥಳಗಳು ಹಾಗೂ ಸೂಕ್ತ ಪ್ರದೇಶಗಳಲ್ಲಿ ಹಂತ ಹಂತವಾಗಿ ಸಸಿಗಳನ್ನು ನೆಡುವ ಮೂಲಕ ನಗರದ ಸೌಂದರ್ಯವನ್ನು ಹೆಚ್ಚಿಸುವುದರ ಜೊತೆಗೆ ಪರಿಸರ ಸಂರಕ್ಷಣೆಗೆ ಒತ್ತು ನೀಡಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಸಸಿಗಳನ್ನು ನೆಟ್ಟು ಮಾತನಾಡಿ, ಚಿತ್ರದುರ್ಗ ನಗರವನ್ನು ಸ್ವಚ್ಛ, ಸುಂದರ ಹಾಗೂ ಹಸಿರುಮಯ ನಗರವನ್ನಾಗಿ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಕಂಡುಬರುವ ಹಸಿರು ಪರಿಸರ ಮತ್ತು ಸೌಂದರ್ಯೀಕರಣದ ಮಾದರಿಯನ್ನು ಚಿತ್ರದುರ್ಗದಲ್ಲಿಯೂ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸಲಿವೆ ಎಂದು ಅಭಿಪ್ರಾಯಪಟ್ಟರು.

ಪಿಂಕ್ ಟ್ರಂಪೆಟ್ ಟ್ರೀ ಸಸಿಗಳು ಬೆಳೆದು ಹೂವುಗಳಿಂದ ಕಂಗೊಳಿಸಿದಾಗ ನಗರದ ರಸ್ತೆಗಳು ಮತ್ತಷ್ಟು ಆಕರ್ಷಕವಾಗಿ ಕಾಣಲಿವೆ. ಕೇವಲ ಸಸಿಗಳನ್ನು ನೆಡುವುದಷ್ಟೇ ನಮ್ಮ ಉದ್ದೇಶವಾಗಬಾರದು. ಅವುಗಳನ್ನು ನಿರಂತರವಾಗಿ ಪೋಷಿಸಿ, ನೀರುಣಿಸಿ, ಸಂರಕ್ಷಿಸುವ ಜವಾಬ್ದಾರಿಯನ್ನೂ ಪ್ರತಿಯೊಬ್ಬರೂ ವಹಿಸಿಕೊಳ್ಳಬೇಕು. ಯುವಜನರು ಪರಿಸರ ಸಂರಕ್ಷಣೆಯ ಕಾರ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ನಗರದ ಸೌಂದರ್ಯೀಕರಣದ ಜೊತೆಗೆ ಪರಿಸರ ಸಮತೋಲನ ಕಾಪಾಡುವುದು, ಹಸಿರು ವಾತಾವರಣ ನಿರ್ಮಿಸುವುದು ಮತ್ತು ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸಿಕೊಡುವುದು ಈ ಅಭಿಯಾನದ ಪ್ರಮುಖ ಆಶಯವಾಗಿದೆ ಎಂದು ಪಪ್ಪಿಸ್ ಸ್ಟೂಡೆಂಟ್ ವಿಂಗ್‌ನ ಅಧ್ಯಕ್ಷ ರವೀಂದ್ರ ಚಿನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತರಾದ ಲಕ್ಷ್ಮಿ,ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಾಜು, ಎಂಜಿನಿಯರ್ ಜಾಫರ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಸರ್ದಾರ್, ಪಪ್ಪಿಸ್ ಸ್ಟೂಡೆಂಟ್ ವಿಂಗ್‌ನ ಉಪಾಧ್ಯಕ್ಷರಾದ ಸಂದೀಪ್, ಕಾರ್ಯದರ್ಶಿ ಸಲೀಂ, ಸದಸ್ಯರಾದ ಮಧು, ರಫಿ, ದರ್ಶನ್, ಅಜಯ್, ಉದಯ್, ಮಿಥುನ್, ಗೌತಮ್, ವಿನಯ್, ರಂಜಿತ್, ಸುಮಂತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now