Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವುದು ನಿಷೇಧ :   ಕಾರ್ಮಿಕ ಇಲಾಖೆ ಎಚ್ಚರಿಕೆ

Employment of children under 18 years of age in firecracker shops is prohibited: Labour Department issues warning
---Advertisement---

ಶಿವಮೊಗ್ಗ : ದೀಪಾವಳಿ ಹಬ್ಬದ ಪ್ರಯುಕ್ತ ಶಿವಮೊಗ್ಗ ಜಿಲ್ಲೆ ಹಾಗೂ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತಿರುವ ಪಟಾಕಿ ಮಾರಾಟ ಮಳಿಗೆಗಳು, ಪಟಾಕಿ ತಯಾರಿಕೆ, ಮಾರಾಟ ಹಾಗೂ ಇತರ ಪ್ರಕ್ರಿಯೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016ರ ಪ್ರಕಾರ, 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ (ಪಟಾಕಿ ಮಾರಾಟ/ತಯಾರಿಕೆ ಸೇರಿದಂತೆ) ಕೆಲಸಕ್ಕೆ ನಿಯೋಜಿಸುವುದು ಕಾನೂನುಬಾಹಿರವಾಗಿದೆ.

ಒಂದು ವೇಳೆ ಪಟಾಕಿ ಮಳಿಗೆಗಳಲ್ಲಿ ಅಥವಾ ತಯಾರಿಕಾ ಘಟಕಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡಿರುವುದು ಕಂಡುಬಂದರೆ, ಸಂಬಂಧಪಟ್ಟ ಮಾಲೀಕರ ವಿರುದ್ಧ ಬಾಲಕಾರ್ಮಿಕ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಎಚ್ಚರಿಸಿದೆ.

Join WhatsApp

Join Now

Join Telegram

Join Now