Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ : ಶೇ. 15.75 ರಿಂದ ಶೇ. 18ಕ್ಕೆ ಏರಿಕೆ ಮಾಡಿ ಸರ್ಕಾರ ಅಧಿಕೃತ ಆದೇಶ

---Advertisement---

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ವೇತನದಾರರಿಗೆ ಕರ್ನಾಟಕ ಸರ್ಕಾರವು ದೀಪಾವಳಿ ಬೆನ್ನಲ್ಲೇ ಮಹತ್ವದ ಸಿಹಿಸುದ್ದಿ ನೀಡಿದ್ದು, ತುಟ್ಟಿಭತ್ಯೆ (DA) ದರವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಸರ್ಕಾರದ ನಡವಳಿಗಳ ಪ್ರಕಾರ, 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಪ್ರಸ್ತುತ ನೀಡಲಾಗುತ್ತಿರುವ ತುಟ್ಟಿಭತ್ಯೆಯ ಪ್ರಮಾಣವನ್ನು ಮೂಲ ವೇತನದ ಶೇ. 15.75 ರಿಂದ ಶೇ. 18ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲಾಗಿದೆ. ಈ ಆದೇಶವು 2026ರ ಜುಲೈ 1 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ.

ಪಿಂಚಣಿದಾರರಿಗೂ ಅನ್ವಯ

ರಾಜ್ಯ ಸರ್ಕಾರದ ನಿವೃತ್ತ ವೇತನದಾರರು/ಕುಟುಂಬ ನಿವೃತ್ತ ವೇತನದಾರರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತ ವೇತನದಾರರಿಗೂ ಈ ಹೆಚ್ಚಳ ಅನ್ವಯವಾಗಲಿದ್ದು, ಅವರ ತುಟ್ಟಿಭತ್ಯೆಯನ್ನು ಮೂಲ ಪಿಂಚಣಿಯ ಶೇ. 15.75 ರಿಂದ ಶೇ. 18 ಕ್ಕೆ ಹೆಚ್ಚಿಸಲಾಗಿದೆ.

ಹಿಂಬಾಕಿ ಪಾವತಿ: 2026ರ ಜುಲೈ 1 ರಿಂದ ಅನ್ವಯವಾಗುವ ಈ ಪರಿಷ್ಕೃತ ತುಟ್ಟಿಭತ್ಯೆಯ ಬಾಕಿ ಮೊತ್ತವನ್ನು (ಅರಿಯರ್ಸ್) 2026ರ ನವೆಂಬರ್ ತಿಂಗಳ ವೇತನ/ಪಿಂಚಣಿ ವಿತರಣೆಗೂ ಮೊದಲು ನಗದಾಗಿ ಪಾವತಿಸತಕ್ಕದ್ದು ಎಂದು ತಿಳಿಸಲಾಗಿದೆ.

ಯಾರಿಗೆಲ್ಲ ಅನ್ವಯ?: ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರು, ಕಾಲಿಕ ವೇತನ ಶ್ರೇಣಿಯಲ್ಲಿರುವ ವರ್ಕ್‌ಚಾರ್ಜ್ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯವಾಗಲಿದೆ.

ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ನಿವೃತ್ತರಾದ ರಾಜ್ಯ ಪಿಂಚಣಿದಾರರಿಗೂ ಈ ಸೌಲಭ್ಯ ಲಭ್ಯವಾಗಲಿದೆ. (ಯುಜಿಸಿ/ಎಐಸಿಟಿಇ ವೇತನ ಶ್ರೇಣಿಯಲ್ಲಿ ಹಾಲಿ ಸೇವೆ ಸಲ್ಲಿಸುತ್ತಿರುವ ನೌಕರರು ಹಾಗೂ ನ್ಯಾಯಾಂಗ ಅಧಿಕಾರಿಗಳಿಗೆ ಪ್ರತ್ಯೇಕ ಆದೇಶ ಹೊರಡಿಸಲಾಗುತ್ತದೆ).

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ