Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಈರುಳ್ಳಿ ನೀರಾವರಿ ಬೆಳೆಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ: ನೋಂದಣಿಗೆ ನವೆಂಬರ್ 30 ಕೊನೆಯ ದಿನ

---Advertisement---

 

ಚಿತ್ರದುರ್ಗ. ನ.11 : 2026-27ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಈರುಳ್ಳಿ ನೀರಾವರಿ ಬೆಳೆಗೆ ಅನುಷ್ಠಾನಗೊಳಿಸಲಾಗುತ್ತಿದ್ದು, ವಿಮೆ ನೋಂದಣಿಗೆ ನವೆಂಬರ್ 30 ಕೊನೆ ದಿನ.

ಚಿತ್ರದುರ್ಗ ತಾಲ್ಲೂಕಿನ ಕಸಬಾ ಹೋಬಳಿ ಮತ್ತು ತುರುವನೂರು ಹೋಬಳಿ, ಚಳ್ಳಕೆರೆ ತಾಲ್ಲೂಕಿನ ಕಸಬಾ ಹೋಬಳಿ ಮತ್ತು ತಳಕು ಹೋಬಳಿ, ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿ, ಧರ್ಮಪುರ ಹೋಬಳಿ ಹಾಗೂ ಜೆ.ಜಿ.ಹಳ್ಳಿ ಹೋಬಳಿ ಮತ್ತು ಮೊಳಕಾಲ್ಮುರು ತಾಲ್ಲೂಕಿನ ದೇವಸಮುದ್ರ ಹೋಬಳಿ ಹಾಗೂ ಕಸಬಾ ಹೋಬಳಿಯಲ್ಲಿ ಈರುಳ್ಳಿ ನೀರಾವರಿ ಬೆಳೆಗೆ ಅನ್ವಯಿಸುತ್ತದೆ.

ಈ ಯೋಜನೆಗೆ ನಿಗದಿಪಡಿಸಲಾದ ವಿಮಾ ಕಂಪನಿ ಇಫ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪನಿಯಾಗಿದೆ. ವಿಮಾ ಮೊತ್ತ ಹಾಗೂ ಕಂತಿನ ವಿವರ ಪ್ರತಿ ಹೆಕ್ಟೇರ್‍ಗೆ ಇಂತಿದೆ. ಈರುಳ್ಳಿ ನೀರಾವರಿ ಬೆಳೆಗೆ ಇಂಡೆಮಿಟಿ ಮಟ್ಟ ಶೇ. 90ರಷ್ಟಿದ್ದು, ಒಟ್ಟು ವಿಮಾ ಮೊತ್ತ ರೂ.93,900.00 ಆಗಿದೆ. ಇದರಲ್ಲಿ ರೈತರ ವಿಮಾ ಕಂತು ಶೇ. 5 ರಂತೆ ಒಟ್ಟು ರೂ.4,695 ಆಗಿರುತ್ತದೆ. ಅಧಿಸೂಚಿತ ಬೆಳೆಗಳ ವಿಮೆಯನ್ನು ಬ್ಯಾಂಕ್‍ಗಳಲ್ಲಿ, ಸಾಮಾನ್ಯ ಸೇವಾ ಕೇಂದ್ರಗಳಲ್ಲಿ, ಗ್ರಾಮ ಒನ್ ಕೇಂದ್ರಗಳಲ್ಲಿ ಅಥವಾ ಆರ್ಥಿಕ ಸಂಸ್ಥೆಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಹತ್ತಿರದ ಬ್ಯಾಂಕ್‍ಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now