Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಧಾನಮಂತ್ರಿ ಭೇಟಿ ಹಿನ್ನೆಲೆ : ಬೆಂಗಳೂರಲ್ಲಿ ಇಂದು ನಾಳೆ, ಮದ್ಯ, ಮಾಂಸದ ಅಂಗಡಿಗಳು ಬಂದ್

---Advertisement---

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಕಾರದ ವತಿಯಿಂದ  ನವೆಂಬರ್ 13 ರಂದು ‘ಪ್ರಶಾಂತಿ ಕುಟೀರ’ದಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಭದ್ರತಾ ಹಿತದೃಷ್ಟಿಯಿಂದ ಮದ್ಯದಂಗಡಿಗಳನ್ನು ಮುಚ್ಚಲು ಬೆಂಗಳೂರು  ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ.ಎಸ್ ಅವರು ಆದೇಶ ಹೊರಡಿಸಿದ್ದಾರೆ.

ಪ್ರಧಾನಮಂತ್ರಿಗಳ ಭದ್ರತೆ ಹಾಗೂ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ಸನ್ನದುಗಳು, ಸಾಮಾನ್ಯ ಷರತ್ತುಗಳು ನಿಯಮಗಳು 1967ರ ನಿಯಮ -10 (ಬಿ) ರಂತೆ ಪದತ್ತವಾದ ಅಧಿಕಾರವನ್ನು ಚಲಾಯಿಸಿ ನವೆಂಬರ್ 12 ರ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 13 ರ ಸಂಜೆ 4 ಗಂಟೆಯವರೆಗೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಜಿಗಣಿ ಹೋಬಳಿಯ ಕಲ್ಲುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಧ್ಯದ ಅಂಗಡಿಗಳನ್ನು (ವೈನ್ ಸ್ಟೋರ್ಗಳು ಹಾಗೂ ಬಾರ್ ಮತ್ತು ರೆಸ್ಟೋರೆಂಟ್ಗಳನ್ನು) ಮುಚ್ಚುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

ನವೆಂಬರ್ 12 ಮತ್ತು 13 ರಂದು ಮಾಂಸದ ಅಂಗಡಿಗಳು ಬಂದ್

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಕಾರದ ವತಿಯಿಂದ  ನವೆಂಬರ್ 13 ರಂದು ‘ಪ್ರಶಾಂತಿ ಕುಟೀರ’ದಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಗಳು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ  ಹಾಗೂ ಭದ್ರತಾ ಹಿತದೃಷ್ಟಿಯಿಂದ ಮಾಂಸದ ಅಂಗಡಿಗಳನ್ನು ಮುಚ್ಚಲು ಬೆಂಗಳೂರು  ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ.ಎಸ್ ಅವರು ಆದೇಶ ಹೊರಡಿಸಿದ್ದಾರೆ.

ಪ್ರಧಾನಮಂತ್ರಿಗಳ ಭದ್ರತೆ ಹಾಗೂ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ರ ಸೆಕ್ಷನ್ 163(1) ರಡಿ ಪದತ್ತವಾದ ಅಧಿಕಾರವನ್ನು ಚಲಾಯಿಸಿ ನವೆಂಬರ್ 12 ರ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 13 ರ ಸಂಜೆ 4 ಗಂಟೆಯವರೆಗೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಜಿಗಣಿ ಹೋಬಳಿಯ ಕಲ್ಲುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

Join WhatsApp

Join Now

Join Telegram

Join Now