ಚಿತ್ರದುರ್ಗ, (ಮಾರ್ಚ್.17) : ಇದೇ ಮಾರ್ಚ್ 19ರಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಹೊಳಲ್ಕೆರೆ ತಾಲ್ಲೂಕು ಚೌಡಗೊಂಡನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ವಾಸ್ತವ್ಯ ಮಾಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.
ಜಿಲ್ಲಾಧಿಕಾರಿಗಳು ಭೇಟಿ ನೀಡುವ ತಾಲ್ಲೂಕು ಹೊರತುಪಡಿಸಿ ಉಳಿದ ತಾಲ್ಲೂಕಿನ ತಹಶೀಲ್ದಾರರು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನ ತಹಶೀಲ್ದಾರ್ ಹುಣಸೇಕಟ್ಟೆ ಗ್ರಾಮ,
ಹಿರಿಯೂರಿನ ತಾಲ್ಲೂಕಿನ ತಹಶೀಲ್ದಾರ್ ಹೊಸನಾಯಕನಹಟ್ಟಿ,
ಹೊಸದುರ್ಗ ತಾಲ್ಲೂಕು ತಹಶೀಲ್ದಾರ್ ಬೊಮ್ಮೇನಹಳ್ಳಿ,
ಚಳ್ಳಕೆರೆ ತಾಲ್ಲೂಕು ತಹಶೀಲ್ದಾರ್ ಮುಸ್ಟಲಗುಮ್ಮಿ ಹಾಗೂ
ಮೊಳಕಾಲ್ಮುರು ತಾಲ್ಲೂಕಿನ ತಹಶೀಲ್ದಾರ್ ವೆಂಕಟಾಪುರ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.