ಸುದ್ದಿಒನ್, ಚಿತ್ರದುರ್ಗ, ನವೆಂಬರ್. 14 : ನಗರದ ವಿದ್ಯಾ ವಿಕಾಸ ಅಕಾಡೆಮಿ ವತಿಯಿಂದ ಇಂದು ಸಂಸ್ಥೆಯ ಸಭಾಂಗಣದಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯಂತ ಸಡಗರ, ಸಂಭ್ರಮ ಹಾಗೂ ಉತ್ಸಾಹದಿಂದ ಆಚರಿಸಲಾಯಿತು.
ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಪ್ರಯುಕ್ತ ಆಯೋಜಿಸಲಾಗಿದ್ದ ಈ ವಿಶೇಷ ಕಾರ್ಯಕ್ರಮದಲ್ಲಿ ಮಕ್ಕಳ ಪ್ರತಿಭೆ ಮತ್ತು ಸೃಜನಶೀಲತೆಗೆ ವೇದಿಕೆ ಕಲ್ಪಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿಜಯ್ ಕುಮಾರ್ ಹಾಗೂ ಪ್ರಾಂಶುಪಾಲರಾದ ಶ್ರೀ ಪದೀಶ್ ಕುಮಾರ್ ಅವರು ಉಪಸ್ಥಿತರಿದ್ದು ಮಕ್ಕಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ಮಾನಸ, ಶ್ರೀಮತಿ ಸಾಕ್ಷಿ, ಕಾರ್ಯಕ್ರಮದ ಸಂಯೋಜಕರಾದ ಶ್ರೀ ಅಶೋಕ್, ಶ್ರೀಮತಿ ಹರೀಬಾ ಸೇರಿದಂತೆ ಶಾಲೆಯ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಮಕ್ಕಳಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಸಂಭ್ರಮಿಸಿದರು.











