Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ನೂತನ ಗೋಶಾಲೆ ಉದ್ಘಾಟಿಸಿದ ಜಿಲ್ಲಾಧಿಕಾರಿ ಎಸ್. ರಮ್ಯಾ

---Advertisement---

ಚಿತ್ರದುರ್ಗ, ನ.15: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪದ ಗಾಯತ್ರಿ ಜಲಾಶಯದ ಬಳಿಯ ಕರಿಯಾಲ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಗೋಶಾಲೆಯನ್ನು ಭಾನುವಾರ ಜಿಲ್ಲಾಧಿಕಾರಿ ಎಸ್. ರಮ್ಯಾ ಅವರು ಉದ್ಘಾಟಿಸಿದರು.

ಉದ್ಘಾಟನೆಯ ಬಳಿಕ ಜಿಲ್ಲಾಧಿಕಾರಿ ಎಸ್.ರಮ್ಯಾ ಹಾಗೂ ಇತರ ಗಣ್ಯರು ಜಾನುವಾರುಗಳಿಗೆ ಮೇವು ವಿತರಿಸುವ ಮೂಲಕ ಗೋಶಾಲೆಯ ಕಾರ್ಯಾರಂಭಕ್ಕೆ ಚಾಲನೆ ನೀಡಿದರು.

ಬರಗಾಲ ಮತ್ತು ಸಂಕಷ್ಟದ ಸಮಯದಲ್ಲಿ ರೈತರ ಜಾನುವಾರುಗಳಿಗೆ ಆಶ್ರಯ, ಕುಡಿಯುವ ನೀರು ಹಾಗೂ ಮೇವು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಈ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ತಹಶೀಲ್ದಾರ್ ಸಿದ್ದೇಶ್, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಸಿ. ತಿಪ್ಪೇಸ್ವಾಮಿ, ಸಹಾಯಕ ನಿರ್ದೇಶಕ ಡಾ. ರಮೇಶ್, ಪಶು ಪರೀಕ್ಷಕ ಲೋಹಿತಾಶ್ವ ಸೇರಿದಂತೆ ಕಂದಾಯ ಹಾಗೂ ಪಶುಸಂಗೋಪನಾ ಇಲಾಖೆಯ ಸಿಬ್ಬಂದಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now