Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BHEL : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

---Advertisement---

 

ಚಿತ್ರದುರ್ಗ. ನ.16: ಕೇಂದ್ರ ಸರ್ಕಾರದ ಸ್ವಾಮ್ಯದ ಭಾರತ್ ಹೆವಿ ಇಲೆಕ್ಟಿಕಲ್ಸ್ ಲಿಮಿಟೆಡ್ (BHEL)  ಸಂಸ್ಥೆಯ ಬೆಂಗಳೂರು ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಸಂಸ್ಥೆಯ ಜಾಲತಾಣವಾದ careers.bhel.in
ಮೂಲಕ ನವೆಂಬರ್ 18 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣರಾಗಿ ಸಂಬಂಧಪಟ್ಟ ಟ್ರೇಡ್‍ನಲ್ಲಿ ಐಟಿಐ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಐಟಿಐ ಪ್ರಮಾಣ ಪತ್ರ (ಸ್ವ ದೃಢೀಕೃತ ರಿಸಲ್ಟ್ ಶೀಟ್) ಜಾತಿ ಪ್ರಮಾಣ ಪತ್ರ, ಅಂಗವಿಕಲರ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್ ಜೆರಾಕ್ಸ್, 4 ಭಾವಚಿತ್ರಗಳು ಮತ್ತು ಎನ್‍ಸಿವಿಟಿ ಎಂಐಎಸ್ ಪೋರ್ಟಲ್ ನೋಂದಣಿ ಪ್ರತಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ www.bhel.com
ಜಾಲತಾಣವನ್ನು ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಚಿತ್ರದುರ್ಗದ ದೂರವಾಣಿ ಸಂಖ್ಯೆಗಳಾದ 9945587060, 7022459064, 7019755147 ಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now