Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್.ಟಿ ಯುವಕರಿಗೆ ಸೋಲಾರ್ ಪಿವಿ ತರಬೇತಿಗೆ ಅರ್ಜಿ ಆಹ್ವಾನ

---Advertisement---

 

ಚಿತ್ರದುರ್ಗ. ನ.17: ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ನವದೆಹಲಿ ರವರ ಪಿಎಂ-ಜನ್‍ಮನ್ (PM-JANMAN) ಹಾಗೂ ಡಿಎ-ಜೆಜಿಜೆಯುಎ (DA-JGUA)  ಯೋಜನೆಯಡಿ ಗ್ರಾಮಗಳಲ್ಲಿನ ಪರಿಶಿಷ್ಟ ಪಂಗಡ ಹಾಗೂ ನೈಜ ದುರ್ಬಲ ಬುಡಕಟ್ಟು ಸಮುದಾಯದ ಯುವಕರಿಗೆ ಸೋಲಾರ್ ಪಿವಿ ಉಚಿತ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಮಿನಿಸ್ಟ್ರಿ ಆಫ್ ನ್ಯೂ ಅಂಡ್ ರಿನ್ಯೂಯೆಬಲ್ ಎನರ್ಜಿ (MNRE)  ಸಹಯೋಗದೊಂದಿಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಸೋಲಾರ್ ಪ್ರೊಪ್ರೆನ್ಯೂರ್ಸ್ (Solar Entrepreneurs) ಕಾರ್ಯಕ್ರಮದಡಿ ಸೋಲಾರ್ ಪಿವಿ ಹೆಲ್ಪರ್-ಕಮ್-ಅಸಿಸ್ಟೆಂಟ್ ಟೆಕ್ನಿಷಿಯನ್’ (Solar PV Helper-cum Assistant Technician)  ತರಬೇತಿ ನೀಡಲಾಗುತ್ತದೆ. ಈ ತರಬೇತಿ ಪಡೆಯಲು ಆಸಕ್ತಿಯಿರುವ ಪಿವಿಟಿಜಿ (PVTG)  ಮತ್ತು ಎಸ್‍ಟಿ (ST)  ಸಮುದಾಯದ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಕನಿಷ್ಠ 5ನೇ ತರಗತಿ ಉತ್ತೀರ್ಣರಾಗಿರಬೇಕು, ಓದಲು ಮತ್ತು ಬರೆಯಲು ತಿಳಿದಿರಬೇಕು ಹಾಗೂ ತರಬೇತಿಯಲ್ಲಿ ಭಾಗವಹಿಸಲು ಮತ್ತು ಅಗತ್ಯ ತಾಂತ್ರಿಕ ಕೌಶಲ್ಯಗಳನ್ನು ಕಲಿಯಲು ಆಸಕ್ತಿ ಹೊಂದಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಚಿತ್ರದುರ್ಗ (ಜೆ.ಸಿ.ಆರ್. ಬಡಾವಣೆ, 4ನೇ ಕ್ರಾಸ್ (ಪೂರ್ವ), ಗಣೇಶ ದೇವಸ್ಥಾನದ ಹತ್ತಿರ, ಚಿತ್ರದುರ್ಗ) ಅಥವಾ ಆಯಾ ತಾಲೂಕಿನ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಹಾಗೂ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಪಡೆದು ಸಲ್ಲಿಸಬಹುದು.

ಅರ್ಜಿಗಳನ್ನು ಭರ್ತಿ ಮಾಡಿ ನವೆಂಬರ್ 25ರ ಸಂಜೆ 5.30ರೊಳಗೆ ಆಯಾ ತಾಲೂಕಿನ ಕಚೇರಿಯಲ್ಲಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now