Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ಇ-ಕೆವೈಸಿ ಮಾಡಿಸಲು ನ.30 ಕೊನೆಯ ದಿನ!

---Advertisement---

ಬೆಂಗಳೂರು : ರಾಜ್ಯದ  ಎಲ್ಲಾ ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಯಲ್ಲಿರುವ ಸದಸ್ಯರ ಇ-ಕೆವೈಸಿ ಪ್ರಕ್ರಿಯೆಯನ್ನು ನವೆಂಬರ್ 30 ರೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಕೇಂದ್ರ ಸರ್ಕಾರದ ಆದೇಶದಂತೆ ಪ್ರತಿ ಐದು ವರ್ಷಗಳಿಗೊಮ್ಮೆ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಸರ್ಕಾರವು ಇ-ಕೆವೈಸಿ ಪೂರ್ಣಗೊಳಿಸಲು ನವೆಂಬರ್ 30, 2026 ಕೊನೆಯ ದಿನಾಂಕ ನಿಗದಿಪಡಿಸಿದೆ. ಈ ಪ್ರಕ್ರಿಯೆಯು ಸಂಪೂರ್ಣ ಉಚಿತವಾಗಿದ್ದು, ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಫಲಾನುಭವಿಗಳು ತಾವು ಪ್ರಸ್ತುತ ವಾಸವಿರುವ ಜಿಲ್ಲೆ ಅಥವಾ ರಾಜ್ಯದ ಹತ್ತಿರದ ಯಾವುದೇ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.

ಅಲ್ಲದೆ, ಗೂಗಲ್ ಪ್ಲೇ ಸ್ಟೋರ್‌ನಿಂದ ಅನ್ನ ಸೇವಾ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಮುಖಚರ್ಯೆ ಗುರುತಿಸುವ (ಫೇಸ್ ಅಥೆಂಟಿಕೇಷನ್) ಸೌಲಭ್ಯದ ಮೂಲಕವೂ ಮನೆಯಲ್ಲಿಯೇ ಇ-ಕೆವೈಸಿ ಪೂರ್ಣಗೊಳಿಸಬಹುದು.

ಆದ್ದರಿಂದ ಇನ್ನುಳಿದ ಫಲಾನುಭವಿಗಳು ಕೊನೆಯ ದಿನಾಂಕದವರೆಗೆ ಕಾಯದೆ ನವೆಂಬರ್ 30ರೊಳಗಾಗಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಕೊಪ್ಪಳ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಕಚೇರಿಯ ಪ್ರಕಟಣೆ ತಿಳಿಸಿದೆ.

Join WhatsApp

Join Now

Join Telegram

Join Now