ಸುದ್ದಿಒನ್, ಚಿತ್ರದುರ್ಗ, ನವೆಂಬರ್. 20 :
ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ, ಚಿತ್ರದುರ್ಗ, 66/11 ಕೆ.ವಿ ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ, ಗೋಡಬನಾಳು, ತೇಕಲವಟ್ಟಿ , ಐಮಂಗಲ ವಿ.ವಿ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಗಳಿಗೆ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿ ಕೋರಿರುವುದರಿಂದ ಸದರಿ ವಿ.ವಿ ಕೇಂದ್ರಂಗಳಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ದಿನಾಂಕ 22.11.2026 ಭಾನುವಾರದಂದು
ಬೆಳಿಗ್ಗೆ 10.00 ರಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಾಯವಾಗಲಿದೆ.
ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು :
ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ, ಗೋಡಬನಾಳು, ತೇಕಲವಟ್ಟಿ, ಐಮಂಗಲ ಮತ್ತು ಸುತ್ತಮುತ್ತಲಿನ ಗ್ರಾಮಗಳು. ಆದುದರಿಂದ ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಮನವಿ ಮಾಡಿದ್ದಾರೆ.











