Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂ ಕೋರ್ಟ್ ಅಸ್ತು!

---Advertisement---

ನವದೆಹಲಿ: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮುಂದುವರಿಕೆಗೆ ಹಾದಿ ಸುಗಮವಾಗಿದೆ.

ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮಾ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಈ ಮಹತ್ವದ ಆದೇಶವನ್ನು ಹೊರಡಿಸಿದೆ.

ಪ್ರಕರಣದ ಹಿನ್ನೆಲೆ ಏನು?

ರಾಜ್ಯ ಸರ್ಕಾರವು ಸೂಕ್ತ ನಿಯಂತ್ರಣ ನೀತಿಯನ್ನು ರೂಪಿಸುವವರೆಗೆ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಹೈಕೋರ್ಟ್‌ನ ಏಕಸದಸ್ಯ ಪೀಠವು ಈ ಹಿಂದೆ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಓಲಾ (Ola), ಉಬರ್ (Uber), ರಾಪಿಡೋ (Rapido) ಸಂಸ್ಥೆಗಳು, ಬೈಕ್ ಮಾಲೀಕರು ಹಾಗೂ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘವು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದವು.

ಈ ಮೇಲ್ಮನವಿಗಳ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗೀಯ ಪೀಠವು ಜನವರಿ 23, 2026 ರಂದು ಬೈಕ್ ಟ್ಯಾಕ್ಸಿ ಮೇಲಿನ ನಿಷೇಧವನ್ನು ತೆರವುಗೊಳಿಸಿ ತೀರ್ಪು ನೀಡಿತ್ತು. ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಿ, ಕಾಂಟ್ರಾಕ್ಟ್ ಕ್ಯಾರೇಜ್ (Contract Carriage) ಆಗಿ ಬಳಸಬಹುದು ಎಂದು ಪೀಠ ಅಭಿಪ್ರಾಯಪಟ್ಟಿತ್ತು. ರಾಜ್ಯ ಸರ್ಕಾರವು ನಿಯಂತ್ರಣ ಷರತ್ತುಗಳನ್ನು ವಿಧಿಸಬಹುದೇ ಹೊರತು, ಕೇವಲ ಮೋಟಾರ್ ಸೈಕಲ್ ಎಂಬ ಕಾರಣಕ್ಕೆ ಪರ್ಮಿಟ್ ನಿರಾಕರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿತ್ತು. ಅಲ್ಲದೆ, ಬೈಕ್ ಟ್ಯಾಕ್ಸಿ ನೋಂದಣಿ ಮತ್ತು ಪರ್ಮಿಟ್‌ಗಾಗಿ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಗಣಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಎಲ್ಲಾ ಮೇಲ್ಮನವಿಗಳನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದ್ದು, ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಯಥಾಪ್ರಕಾರ ಮುಂದುವರಿಯಲು ಅನುಮತಿ ನೀಡಿದೆ.

Join WhatsApp

Join Now

Join Telegram

Join Now