ಸುದ್ದಿಒನ್, ಚಿತ್ರದುರ್ಗ, ನವೆಂಬರ್. 20 : ಮಾಡನಾಯಕನಹಳ್ಳಿಯ ನಿವಾಸಿ ನಿವೃತ್ತ ಶಿಕ್ಷಕ ಟಿ.ಶಂರಪ್ಪ(92) ಬಸವೇಶ್ವರ ನಗರದಲ್ಲಿರುವ ಪುತ್ರಿಯ ನಿವಾಸದಲ್ಲಿ ಶುಕ್ರವಾರ ಬೆಳಗಿನ ಜಾವ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮಾಡನಾಯಕನಹಳ್ಳಿಯಲ್ಲಿರುವ ಅವರ ತೋಟದಲ್ಲಿ ಮೃತರ ಅಂತ್ಯಕ್ರಿಯೆ ಶುಕ್ರವಾರ ನೆರವೇರಿಸಲಾಯಿತೆಂದು ಕುಟುಂಬದವರು ತಿಳಿಸಿದ್ದಾರೆ.
ಸಂತಾಪ : ಮಾಡನಾಯಕನಹಳ್ಳಿಯ ಟಿ.ಶಂಕರಪ್ಪನವರ ನಿಧನಕ್ಕೆ ಸಮಾಜ ಸೇವಕರಾದ ನಾಗರಾಜ್ ಸಂಗಮ್ ಸಂತಾಪ ಸೂಚಿಸಿದ್ದು, ದುಃಖತಪ್ತ ಕುಟುಂಬಕ್ಕೆ ನೆಮ್ಮದಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.











