Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು ಉಪಚುನಾವಣೆಗೆ ಟಿಕೆಟ್ ಸಿಗದಿದ್ದರೂ ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುವೆ: ರಾಜಣ್ಣ ಸ್ಪಷ್ಟನೆ

---Advertisement---

ಸುದ್ದಿಒನ್, ಹಿರಿಯೂರು, ನವೆಂಬರ್. 20 : ಉಪಚುನಾವಣೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ರಾಜಣ್ಣ ಅವರು, ಎನ್‌ಡಿಎ ಮೈತ್ರಿಕೂಟದ ಒಮ್ಮತದ ನಿರ್ಧಾರಕ್ಕೆ ತಾವು ಬದ್ಧರಾಗಿದ್ದು, ಟಿಕೆಟ್ ಸಿಗದಿದ್ದರೂ ಮೈತ್ರಿಕೂಟದ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯೂರಿನಿಂದಲೇ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಕೆಲಸ ಮಾಡುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು ನಾನು ಬಿಜೆಪಿ ಟಿಕೆಟ್‌ನ ಆಕಾಂಕ್ಷಿಯಾಗಿದ್ದರೂ, ಎನ್‌ಡಿಎ ಮೈತ್ರಿಕೂಟದ ನಾಯಕರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಮೈತ್ರಿ ಪಕ್ಷವಾದ ಜೆಡಿಎಸ್‌ಗೆ ಅವಕಾಶ ನೀಡಿದರೂ ಸಂಪೂರ್ಣ ಬೆಂಬಲ ನೀಡುತ್ತೇನೆ. ಟಿಕೆಟ್ ಸಿಗದಿದ್ದರೂ ಎನ್‌ಡಿಎ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಪಕ್ಷದಿಂದ ರಾಜಣ್ಣ ಅವರು ಅಭ್ಯರ್ಥಿಯಾಗಲಿದ್ದಾರೆ ಎಂಬ ಚರ್ಚೆಯ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಮ್ಮ ಪಕ್ಷದ ನಾಯಕರು ನೀಡುವ ಸೂಚನೆ ಹಾಗೂ ತೀರ್ಮಾನಕ್ಕೆ ನಾನು ಕಟಿಬದ್ಧನಾಗಿರುತ್ತೇನೆ ಎಂದು ತಿಳಿಸಿದರು. ಈ ಮೂಲಕ ಹಿರಿಯೂರು ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಎನ್‌ಡಿಎ ಮೈತ್ರಿಕೂಟದ ನಿರ್ಧಾರವೇ ಅಂತಿಮ ಎಂಬ ಸಂದೇಶವನ್ನು ರಾಜಣ್ಣ ನೀಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ