ಚಿತ್ರದುರ್ಗ. ನ.20: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಸಿ.ಎಂ.ಸಿ.ಆರ್.ಐ.) 2026-27ನೇ ಸಾಲಿನಲ್ಲಿ ನೂತನವಾಗಿ ದಾಖಲಾಗಿರುವ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗಾಗಿ ‘ವೈಟ್ ಕೋಟ್ ಸಮಾರಂಭ ಇದೇ ನವೆಂಬರ್ 21ರಂದು ಬೆಳಿಗ್ಗೆ 11ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ನಡೆಯಲಿದೆ.
ವೈದ್ಯಕೀಯ ಶಿಕ್ಷಣ ಕಲಿಕೆಗೆ ಪಾದಾರ್ಪಣೆ ಮಾಡುತ್ತಿರುವ ನೂತನ ವಿದ್ಯಾರ್ಥಿಗಳಿಗೆ ವೃತ್ತಿಪರತೆ, ನೈತಿಕತೆ ಮತ್ತು ಸೇವಾ ಮನೋಭಾವದ ಪ್ರತಿಜ್ಞೆ ಬೋಧಿಸುವ ಈ ವಿಶೇಷ ಸಮಾರಂಭದ ಅಧ್ಯಕ್ಷತೆಯನ್ನು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ. ಯುವರಾಜ್.ಬಿ.ವೈ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜೀವ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮಾಜಿ ಉಪಕುಲಪತಿಗಳು ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕರೂ ಆದ ಹೃದ್ರೋಗ ತಜ್ಞ ಡಾ. ಕೆ.ಎಸ್. ರವೀಂದ್ರನಾಥ್ ಅವರು ಆಗಮಿಸಲಿದ್ದಾರೆ.
ಗೌರವಾನಿತ ಆಹ್ವಾನಿತರಾಗಿ ಸಿ.ಎಂ.ಸಿ.ಆರ್.ಐ.ನ ಪ್ರಭಾರ ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಆರ್ಥಿಕ ಸಲಹೆಗಾರರಾದ ವಿಶ್ವಾಸಿ.ಎಸ್.ವಿ., ಅಕಾಡೆಮಿಕ್ ರಿಜಿಸ್ಟ್ರಾರ್ ಡಾ. ಚಂದ್ರಿಕ.ಎನ್. ಮತ್ತು ವೈದ್ಯಕೀಯ ಅಧೀಕ್ಷಕರಾದ ಡಾ. ಮೇಘ.ಜಿ.ಹೆಚ್. ಅವರು ಭಾಗವಹಿಸಲಿದ್ದಾರೆ. ಸಂಸ್ಥೆಯ ಎಲ್ಲ ಪ್ರಾಧ್ಯಾಪಕರು, ಬೋಧಕರು, ವಿದ್ಯಾರ್ಥಿಗಳು, ಆಡಳಿತ ಮಂಡಳಿ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತಿವಹಿಸುವರು ಎಂದು ಪ್ರಕಟಣೆ ತಿಳಿಸಿದೆ.











