Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚೆಕ್ ಅಮಾನ್ಯ ಪ್ರಕರಣಗಳ ವಿಶೇಷ ಲೋಕ ಅದಾಲತ್

---Advertisement---

 

ಚಿತ್ರದುರ್ಗ. ನ.20: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಇದೇ ನವೆಂಬರ್ 21ರಂದು ಚಿತ್ರದುರ್ಗ ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಚೆಕ್ ಅಮಾನ್ಯ ಪ್ರಕರಣಗಳ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.

ಚೆಕ್ ಅಮಾನ್ಯ ಪ್ರಕರಣಗಳ ಉಭಯ ಪಕ್ಷಗಾರರು ರಾಜೀ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಇದರಿಂದ ಪ್ರಕರಣಗಳು ಶೀಘ್ರ ಬಗೆಹರಿಯುವುದಲ್ಲದೆ, ಪೊಲೀಸ್ ಇಲಾಖೆಯ ವಾರೆಂಟ್‍ಗಳ ವಿಲೇವಾರಿ ಕೆಲಸ ಕಡಿಮೆಯಾಗುತ್ತದೆ ಮತ್ತು ನ್ಯಾಯಾಲಯಗಳ ಮೇಲಿನ ಒತ್ತಡವೂ ತಗ್ಗುತ್ತದೆ.

ಉಭಯ ಪಕ್ಷಗಾರರು ಪರಸ್ಪರ ರಾಜೀ ಮೂಲಕ ವಿವಾದ ಬಗೆಹರಿಸಿಕೊಂಡು ಮನಸ್ತಾಪ ಮರೆತು ನೆಮ್ಮದಿ ಕಂಡುಕೊಳ್ಳಬಹುದಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ.ಡಿ. ಮಹಾವರ್ಕರ್ ಅವರು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಾರ್ವಜನಿಕರು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ 15100 ಅನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಮೀರ್ ಪಿ.ನಂದ್ಯಾಲ್ ತಿಳಿಸಿದ್ದಾರೆ.
===========

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now