Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಿವೃತ್ತ ಸರ್ಕಾರಿ ನೌಕರರ ಸಂಘದಿಂದ ಸಿಎಂ ಡಿ.ಕೆ. ಶಿವಕುಮಾರ್‌ಗೆ ಗೌರವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ನ. 23 : 60 ವರ್ಷಕ್ಕೆ ಮೇಲ್ಪಟ್ಟು 70 ವರ್ಷದೊಳಗಿನ ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೆ ಹಾಗೂ ಕುಟುಂಬ ಪಿಂಚಣಿದಾರರಿಗೆ ಸಂಧ್ಯಾ ಕಿರಣ” ನಗದು ರಹಿತ ಆರೋಗ್ಯ ಭಾಗ್ಯ ಯೋಜನೆಯನ್ನು ಸರ್ಕಾರ ಜಾರಿ ಮಾಡಿದ್ದನ್ನು ಸ್ವಾಗತಿಸಿ ಹಿರಿಯೂರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ(ರಿ.), ಚಿತ್ರದುರ್ಗ ಶಾಖೆಯ ಜಿಲ್ಲಾಧ್ಯಕ್ಷರಾದ ಬಿ.ಪಿ.ಪ್ರೇಮನಾಥ್ ಸನ್ಮಾನಿಸಿದ್ದಾರೆ.

ರಾಜ್ಯ ಸರ್ಕಾರ ಜಾರಿ ಮಾಡಿರುವ ಸಂಧ್ಯಾ ಕಿರಣ” ಯೋಜನೆಯಿಂದ ಹಲವಾರು ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೆ ಹಾಗೂ ಕುಟುಂಬ ಪಿಂಚಣಿದಾರರಿಗೆ ಅನುಕೂಲವಾಗಿದೆ. ಪ್ರತಿ ಕುಟುಂಬಕ್ಕೆ ವಾರ್ಷಿಕ ರೂ.5.00ಲಕ್ಷಗಳವರೆಗೆ ವಂತಿಕೆ ಆಧಾರಿತ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (ಎಬಿ-ಎಆರ್‍ಕೆ) ಯೋಜನೆಯಡಿಯಲ್ಲಿನ ನೀತಿಯನ್ವಯ “ಸಂಧ್ಯಾ ಕಿರಣ” ನಗದು ರಹಿತ ಆರೋಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಿದೆ ಉತ್ತಮವಾಗಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ(ರಿ.), ಚಿತ್ರದುರ್ಗ ಶಾಖೆಯ ಪದಾಧಿಕಾರಿಗಳು ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now