Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂವಿಧಾನದಡಿ ಪ್ರತಿ ಮಗುವಿಗೂ ಕಡ್ಡಾಯ ಶಿಕ್ಷಣ ಸಿಗಬೇಕು: ವಕೀಲ ಹೆಚ್.ಅಣ್ಣಪ್ಪಸ್ವಾಮಿ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 25 : ಸಂವಿಧಾನದಡಿ ಪ್ರತಿ ಮಗುವಿಗೂ ಕಡ್ಡಾಯವಾಗಿ ಶಿಕ್ಷಣ ನೀಡಬೇಕೆಂದು ವಕೀಲ ಹೆಚ್.ಅಣ್ಣಪ್ಪಸ್ವಾಮಿ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ತಾಲ್ಲೂಕು ಪಂಚಾಯಿತಿ ಸಹಯೋಗದೊಂದಿಗೆ ಇಂಗಳದಾಳು ಗ್ರಾಮದಲ್ಲಿರುವ ಸಂಚಾಲಪ್ಪ ನಾಯಕರ
ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

6 ರಿಂದ 14 ವರ್ಷದೊಳಗಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಆಳುವ ಸರ್ಕಾರಗಳ ಮೇಲಿದೆ. ಪೋಷಕರುಗಳು ತಮ್ಮ ಮಕ್ಕಳನ್ನು ತಪ್ಪದೆ ಶಾಲೆಗಳಿಗೆ ಕಳಿಸಬೇಕು. ಆರೋಗ್ಯ, ಪೌಷ್ಠಿಕಾಂಶುವುಳ್ಳ ಆಹಾರ ಮಕ್ಕಳಿಗೆ ಸಿಗಬೇಕು. ಮಧ್ಯಾಹ್ನ ಬಿಸಿಯೂಟ, ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ
ಸಾಕ್ಸ್, ಹೀಗೆ ಅನೇಕ ಸವಲತ್ತುಗಳಿವೆ. ಸದುಪಯೋಗ ಪಡೆದುಕೊಂಡು ಶಿಕ್ಷಣವಂತರಾಗುವಂತೆ ಮಕ್ಕಳಿಗೆ ಕರೆ ನೀಡಿದರು.

ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ, ಅತ್ಯಾಚಾರ ಎಸಗುವವರ ಮೇಲೆ ಪೋಕ್ಸೊ ಕಾಯಿದೆಯಡಿ ಕಠಿಣ ಶಿಕ್ಷೆ ವಿಧಿಸಲಾಗುವುದು. ಪೋಕ್ಸೊ ಕಾಯಿದೆಯಿರುವುದೆ ಹೆಣ್ಣು ಮಕ್ಕಳ ರಕ್ಷಣೆಗಾಗಿ ಎನ್ನುವುದನ್ನು ಮನವರಿಕೆ ಮಾಡಿದರು.
ಇಂಗಳದಾಳು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಬಿ.ಎಸ್.ಮಹಾಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು.
ಸಂಚಾಲಪ್ಪ ನಾಯಕರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅನಂತಕುಮಾರ್, ಸಹ ಶಿಕ್ಷಕ ಹೆಚ್.ಧನಂಜಯಪ್ಪ, ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕಿ ಸುಜಾತ, ಗ್ರಾಮಸ್ಥರಾದ ಸಿದ್ದಲಿಂಗಪ್ಪ, ಗ್ರಾಮ ಪಂಚಾಯಿತಿಯ ಲೆಕ್ಕ ಸಹಾಯಕ ಮಂಜುನಾಥ ಇವರುಗಳು ವೇದಿಕೆಯಲ್ಲಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now