Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆರೋಗ್ಯ ಇಲಾಖೆ ಸಿಬ್ಬಂದಿಗೆ ಹೊಸ ನಿಯಮ: ಡಿಸೆಂಬರ್ 1ರಿಂದ ‘ಕರ್ತವ್ಯ’ ಆ್ಯಪ್‌ನಲ್ಲಿ ಚಲನ ವಹಿ, ನಗದು ಘೋಷಣೆ ಕಡ್ಡಾಯ!

New rule for Health Department staff: From December 1, declaring movements and cash holdings on the ‘Karthavya’ app becomes mandatory!
---Advertisement---

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಶಿಸ್ತು ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ‘ಕರ್ನಾಟಕ ಅಡ್ವಾನ್ಸ್ಡ್ ಅಟೆಂಡೆನ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್’ (KAAMS) ಅಡಿಯಲ್ಲಿರುವ ‘ಕರ್ತವ್ಯ’ (Kartavya) ಮೊಬೈಲ್ ಅಪ್ಲಿಕೇಶನ್‌ನಲ್ಲಿ ‘ಚಲನ ವಹಿ’ (Movement Register) ಹಾಗೂ ‘ನಗದು ಘೋಷಣಾ ವಹಿ’ (Cash Declaration Register) ದಾಖಲಿಸುವುದನ್ನು ಕಡ್ಡಾಯಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಸುತ್ತೋಲೆ ಹೊರಡಿಸಿದೆ.

ಈ ನೂತನ ನಿಯಮವು ಡಿಸೆಂಬರ್ 1, 2026ರಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಇಲಾಖೆಯ ಎಲ್ಲಾ ಅಧೀನ ಕಚೇರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳ ಸಿಬ್ಬಂದಿಗೆ ಇದು ಅನ್ವಯವಾಗಲಿದೆ.

ಚಲನ ವಹಿ (Movement Register): ಸಿಬ್ಬಂದಿ ಕಚೇರಿ ಕರ್ತವ್ಯದ ನಿಮಿತ್ತ ಹೊರಗೆ ತೆರಳುವ ಸಂದರ್ಭದಲ್ಲಿ ತೆರಳುವ ಸಮಯ, ಸ್ಥಳ ಮತ್ತು ಉದ್ದೇಶ ಸೇರಿದಂತೆ ಅಗತ್ಯ ವಿವರಗಳನ್ನು ಆ್ಯಪ್‌ನಲ್ಲಿ ಕಡ್ಡಾಯವಾಗಿ ನಮೂದಿಸಬೇಕು.

ನಗದು ಘೋಷಣೆ (Cash Declaration): ಸರ್ಕಾರದ ನಿರ್ದೇಶನದಂತೆ ನಗದು ಘೋಷಣೆಗೆ ಸಂಬಂಧಿಸಿದ ವಿವರಗಳನ್ನು ನಿಗದಿತ ತಂತ್ರಾಂಶದಲ್ಲಿಯೇ ದಾಖಲಿಸಬೇಕು.

ಭೌತಿಕ ವಹಿ ರದ್ದು: ಇನ್ನು ಮುಂದೆ ಭೌತಿಕ (ಕಾಗದದ) ನಗದು ಘೋಷಣಾ ವಹಿಯನ್ನು ಮಾನ್ಯ ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಶಿಸ್ತು ಕ್ರಮದ ಎಚ್ಚರಿಕೆ: ಎಲ್ಲಾ ಸಿಬ್ಬಂದಿ ಕಾಲಕಾಲಕ್ಕೆ ತಪ್ಪದೇ ಈ ನಮೂದುಗಳನ್ನು ನಿರ್ವಹಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಂಸ್ಥೆಯ ಮುಖ್ಯಸ್ಥರು ಈ ಬಗ್ಗೆ ನಿಗಾ ವಹಿಸತಕ್ಕದ್ದು. ನಿಯಮ ಉಲ್ಲಂಘಿಸಿ ನಮೂದುಗಳನ್ನು ನಿರ್ವಹಿಸದ ಸಿಬ್ಬಂದಿ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲು ಸಕ್ಷಮ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವಂತೆ ನಿರ್ದೇಶಿಸಲಾಗಿದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಎಲ್ಲಾ ಜಂಟಿ ನಿರ್ದೇಶಕರು, ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರು, ವೈದ್ಯಕೀಯ ಅಧೀಕ್ಷಕರು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Join WhatsApp

Join Now

Join Telegram

Join Now