ಸುದ್ದಿಒನ್, ಚಿತ್ರದುರ್ಗ, ನವೆಂಬರ್. 25 : ಕೇರಳದ ಶಬರಿಮಲೈನಲ್ಲಿರುವ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಹೋಗಿದ್ದ ಚಿತ್ರದುರ್ಗದ ಸುಹಾಸ್(36) ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅಯ್ಯಪ್ಪಸ್ವಾಮಿಯ ದರ್ಶನ ಪಡೆದು ಹೊರ ಬಂದ ಸುಹಾಸ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಗುರುವಾರ ಬೆಳಿಗ್ಗೆ 8 ಗಂಟೆಗೆ ಚಿತ್ರದುರ್ಗದ ಮುಕ್ತಿಧಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.








