Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಕ್ತದಾನ ಮಹಾದಾನ; ಜೀವ ಉಳಿಸುವ ಕೈಂಕರ್ಯಕ್ಕೆ ಕೈಜೋಡಿಸಿ: ಸಚಿವ ಟಿ. ರಘುಮೂರ್ತಿ

---Advertisement---

ಚಿತ್ರದುರ್ಗ. ನ.25: ರಕ್ತದಾನ ಮಹಾದಾನವಾಗಿದ್ದು, 18 ರಿಂದ 60 ವರ್ಷದೊಳಗಿನ ಆರೋಗ್ಯವಂತರೆಲ್ಲರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಮಹತ್ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಕರೆ ನೀಡಿದರು.

ಹಿರಿಯೂರು ನಗರದ ರಾಷ್ಟ್ರೀಯ ಅಕಾಡೆಮಿ ಶಾಲೆಯಲ್ಲಿ ಬುಧವಾರ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ರಕ್ತದಾನದಿಂದ ಒಬ್ಬ ವ್ಯಕ್ತಿಯ ಪ್ರಾಣ ಉಳಿಯುವುದರ ಜೊತೆಗೆ ದಾನಿಯ ಆರೋಗ್ಯವೂ ವೃದ್ಧಿಯಾಗುತ್ತದೆ. ಜಿಲ್ಲೆಯ 19 ಲಕ್ಷ ಜನಸಂಖ್ಯೆಯಲ್ಲಿ ಕನಿಷ್ಠ ಶೇ 1ರಷ್ಟು  ರಕ್ತ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಸಾರ್ವಜನಿಕರು ಇಚ್ಛಾಶಕ್ತಿಯಿಂದ ಮುಂದೆ ಬಂದು ರಕ್ತದಾನ ಮಾಡಬೇಕು. ನಿಮ್ಮ ಒಂದು ಹನಿ ರಕ್ತ ಮತ್ತೊಬ್ಬರ ಬದುಕಿಗೆ ಬೆಳಕು ನೀಡಬಲ್ಲದು ಎಂದರು.

ಜಿಲ್ಲಾಧಿಕಾರಿ ಎಸ್. ರಮ್ಯಾ ಮಾತನಾಡಿ, ಈ ಬೃಹತ್ ರಕ್ತದಾನ ಶಿಬಿರದ ಸಂಪೂರ್ಣ ಆಯೋಜನೆ ಹಾಗೂ ನಿರ್ವಹಣೆಯನ್ನು ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳೇ ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ನೆರವೇರಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಸೇವಾ ಮನೋಭಾವ ಮತ್ತು ಸಂಘಟನಾ ಚಾತುರ್ಯಕ್ಕೆ ಸಚಿವರು ಸೇರಿದಂತೆ ಗಣ್ಯರು ಪ್ರಶಂಸೆ ವ್ಯಕ್ತಪಡಿಸಿದರು.

ಶಿಬಿರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ಸುನಿಲ್ ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮಹೇಶ್ ಆರ್., ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಘನಶ್ಯಾಮ್ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಬಿ.ಎಂ. ವಿನಯ್ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಮಾದರಿಯಾದರು.

ತಹಶೀಲ್ದಾರ್ ಸಿದ್ದೇಶ್, ನಗರಸಭೆ ಪೌರಾಯುಕ್ತ ವಾಸಿಂ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಮೇಶ್, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಖಾದಿ ಜೆ. ರಮೇಶ್, ಮುಖಂಡರಾದ ಈ. ಲಿಂಗೇಗೌಡ, ಜಯರಾಮಪ್ಪ, ರಾಷ್ಟ್ರೀಯ ಅಕಾಡೆಮಿ ಸಂಸ್ಥೆಯ ವ್ಯವಸ್ಥಾಪಕ ತಿರುಮೂರ್ತಿ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಲ್ಲಮ್ಮ ಉಪಸ್ಥಿತರಿದ್ದರು. ಪೋಷಕರು, ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now