Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

9 ಗ್ರಾಮ ಪಂಚಾಯಿತಿಗಳ ಕರವಸೂಲಿಗಾರ ಹುದ್ದೆ: ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

---Advertisement---

 

ಚಿತ್ರದುರ್ಗ. ನ.27: ಜಿಲ್ಲೆಯ ವಿವಿಧ 9 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ. ಡಿಸೆಂಬರ್ 17 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ.

2026ರ ನವೆಂಬರ್ 20ರಂದು ನಡೆದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯ ಮೌಲ್ಯಮಾಪನದ ಬಳಿಕ ನಿಯಮಾನುಸಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾ ಪಂಚಾಯತ್‍ನ ವೆಬ್‍ಸೈಟ್ chitradurga.nic.in  ಹಾಗೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಛಾವಡಿಯಲ್ಲಿ ಪ್ರಕಟಿಸಲಾಗಿದೆ.
ಪ್ರಕಟಿಸಲಾದ ತಾತ್ಕಾಲಿಕ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು 2026ರ ಡಿಸೆಂಬರ್ 17ರ ಸಂಜೆ 5 ಗಂಟೆಯೊಳಗೆ ಖುದ್ದಾಗಿ (ಮುದ್ದಾಂ) ಜಿಲ್ಲಾ ಪಂಚಾಯತ್ ಕಚೇರಿಗೆ ಸಲ್ಲಿಸಬಹುದಾಗಿದೆ.

ಚಳ್ಳಕೆರೆ ತಾಲ್ಲೂಕಿನ ದೊಡೇರಿ, ಹಿರೇಹಳ್ಳಿ, ಮೈಲನಹಳ್ಳಿ, ಸಾಣಿಕೆರೆ ಮತ್ತು ಜಾಜೂರು ಗ್ರಾಮ ಪಂಚಾಯಿತಿ, ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ, ಹಿರಿಯೂರು ತಾಲ್ಲೂಕಿನ ಗನ್ನಾಯನಹಳ್ಳಿ, ಹೊಳಲ್ಕೆರೆ ತಾಲ್ಲೂಕಿನ ಆರ್. ನುಲೇನೂರು ಹಾಗೂ ಹೊಸದುರ್ಗ ತಾಲ್ಲೂಕಿನ ತಂಡಗ ಗ್ರಾಮ ಪಂಚಾಯಿತಿ ಸೇರಿದಂತೆ ಒಟ್ಟು 9 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆದಿದೆ ಎಂದು ಜಿಲ್ಲಾ ಪಂಚಾಯತ್ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now