Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಸಂತ ಕನಕದಾಸರ 539ನೇ ಜಯಂತಿ ಆಚರಣೆ; ಪ್ರತಿಮೆಗೆ ಜಿಲ್ಲಾಧಿಕಾರಿಗಳಿಂದ ಪುಷ್ಪಾರ್ಚನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 27 : ಸಂತ ಶ್ರೇಷ್ಟ ಭಕ್ತಕನಕದಾಸರ 539 ನೇ ಜಯಂತಿ ಅಂಗವಾಗಿ ಹೊಳಲ್ಕೆರೆ ರಸ್ತೆಯಲ್ಲಿರುವ ಕನಕದಾಸರ ಪ್ರತಿಮೆಗೆ ಶುಕ್ರವಾರ ಮಾಲಾರ್ಪಣೆ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಎಸ್.ರಮ್ಯರವರು ಕನಕದಾಸರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು.
ಕುರುಬರ ಸಂಘದ ಜಿಲ್ಲಾಧ್ಯಕ್ಷ ಶ್ರೀರಾಂ, ಗೌರವಾಧ್ಯಕ್ಷ ಹೆಚ್.ಮಂಜಪ್ಪ, ಕಾರ್ಯಾಧ್ಯಕ್ಷ ಆರ್.ಮಂಜುನಾಥ್, ಖಜಾಂಚಿ ಮೃತ್ಯುಂಜಯ, ಮಹಿಳಾ ಘಟಕದ ಅಧ್ಯಕ್ಷೆ
ಎನ್.ಪುಷ್ಪವಲ್ಲಿ, ಕನಕ ನೌಕರರ ಸಂಘದ ಅಧ್ಯಕ್ಷ ಎಸ್.ಕೆ.ಮಂಜುನಾಥ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ರಮೇಶ್ ಮಧುರೆ, ಮಾಳಪ್ಪನಹಟ್ಟಿಯ ಈಶ್ವರಪ್ಪ, ಅರುಣ್‍ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್, ಗೊಲ್ಲ ಸಮಾಜದ ಮುಖಂಡರು ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಅಲ್ಪಸಂಖ್ಯಾತ ಸಮಾಜದ ಸಲ್ಮಾನ್‍ಖಾನ್, ಡಿಶ್ ರಮೇಶ್, ವಾಲ್ಮೀಕಿ ಸಮಾಜದ ರಾಜೇಶ್, ಗಂಗಾಮತ ಸಮಾಜದ ಶ್ರೀನಿವಾಸ್, ರಘುವೀರ್, ನ್ಯಾಯವಾದಿ ಉಮೇಶ್, ಮಾಳೇಶ್, ರಾಜು ಸಜ್ಜನಕರೆ, ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ದಲಿತ ಮುಖಂಡ ಬಿ.ರಾಜಪ್ಪ, ಛಲವಾದಿ ನಿರಂಜನ್, ನೇತಾಜಿ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಸೇರಿದಂತೆ ಕುರುಬ ಸಮಾಜದ ಅನೇಕ ಮುಖಂಡರು, ಸೋದರ ಸಮಾಜದವರು ಜಯಂತಿಯಲ್ಲಿ ಭಾಗವಹಿಸಿದ್ದರು.
ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪನವರು ಜಿಲ್ಲಾಧಿಕಾರಿಗೆ ಕರಿಗಂಬಳಿ ಹೊದಿಸಿ ಗೌರವಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now