Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಮಟ್ಟದ ‘ಕಲಾಶ್ರೀ’ ಸ್ಪರ್ಧೆಯಲ್ಲಿ ಚಿತ್ರದುರ್ಗಕ್ಕೆ ತೃತೀಯ ಬಹುಮಾನ

---Advertisement---

ಚಿತ್ರದುರ್ಗ. ನ.26: ಬೆಂಗಳೂರಿನ ರಾಜ್ಯ ಬಾಲ ಭವನ ಸೊಸೈಟಿ ವತಿಯಿಂದ ಜವಾಹರ ಬಾಲ ಭವನದಲ್ಲಿ ಬುಧವಾರ ನಡೆದ ರಾಜ್ಯಮಟ್ಟದ ‘ಕಲಾಶ್ರೀ’ ಸ್ಪರ್ಧೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಡಿ.ಶ್ರೇಯಸ್ ಧನ್ವಿಕ್ ತೃತೀಯ ಬಹುಮಾನ ಪಡೆದಿದ್ದಾರೆ.

‘ವಿಜ್ಞಾನದಲ್ಲಿ ನೂತನ ಆವಿಷ್ಕಾರ’ ವಿಭಾಗದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಶ್ರೇಯಸ್ ತೃತೀಯ ಬಹುಮಾನಕ್ಕೆ ಭಾಜನರಾಗಿದ್ದಾರೆ.

ಬಹುಮಾನ ವಿತರಣಾ ಸಮಾರಂಭದಲ್ಲಿ ರಾಜ್ಯ ಬಾಲ ಭವನ ಸೊಸೈಟಿ ಉಪಾಧ್ಯಕ್ಷ ಅನಿಲ್ ಕುಮಾರ್ ಜಮಾದಾರ್, ಕಾರ್ಯದರ್ಶಿ ಡಾ. ಬಿ.ಎಸ್. ನಿಶ್ಚಲ್, ಆಡಳಿತಾಧಿಕಾರಿ ಧನಲಕ್ಷ್ಮಿ, ಅಧೀಕ್ಷಕಿ ಪುಷ್ಪವತಿ, ಜಿಲ್ಲಾ ಕಾರ್ಯಕ್ರಮ ಸಂಯೋಜಕ ಡಿ. ಶ್ರೀಕುಮಾರ್ ಹಾಗೂ ಕಚೇರಿ ಸಹಾಯಕಿ ಪವಿತ್ರಾ ಉಪಸ್ಥಿತರಿದ್ದರು.

ವಿಜೇತ ವಿದ್ಯಾರ್ಥಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಅಧ್ಯಕ್ಷ ಡಾ. ಎಸ್.ಆಕಾಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಹಾಗೂ ಸಮಿತಿ ಕಾರ್ಯದರ್ಶಿ ಕೆ.ಎಚ್. ವಿಜಯ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಮಂಜುಳಾ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now