ಚಿತ್ರದುರ್ಗ. ನ.26: ಮುಖ್ಯಮಂತ್ರಿಗಳ 100 ದಿನಗಳ ಕಾರ್ಯಕ್ರಮದಲ್ಲಿ ಘೋಷಿಸಿರುವ ‘ಉದ್ಯೋಗ ಸೇತು’ ಯೋಜನೆಯಡಿ ಜಿಲ್ಲೆಯ ಎಲ್ಲ ನಿರುದ್ಯೋಗಿ ಅಭ್ಯರ್ಥಿಗಳು ಹಾಗೂ ಖಾಸಗಿ ಕಂಪನಿಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ತಿಳಿಸಿದೆ.
ಈ ಯೋಜನೆಯ ಮೂಲಕ ರಾಜ್ಯದ ನಿರುದ್ಯೋಗಿಗಳು, ಯುವನಿಧಿ ಯೋಜನೆ ಫಲಾನುಭವಿಗಳು ಹಾಗೂ ಹೆಸರಾಂತ ಖಾಸಗಿ ಕಂಪನಿಗಳನ್ನು ವಿಶೇಷ ಪೋರ್ಟಲ್‍ನಲ್ಲಿ ನೋಂದಾಯಿಸಿ ನೇರ ಸಂಪರ್ಕ ಕಲ್ಪಿಸಲಾಗುವುದು. ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಅನುಭವಕ್ಕೆ ಅನುಗುಣವಾಗಿ ಖಾಲಿ ಹುದ್ದೆಗಳಿಗೆ ಮ್ಯಾಚಿಂಗ್ ಮಾಡಿ ಉದ್ಯೋಗ ಒದಗಿಸುವುದು ಹಾಗೂ ಕೌಶಲ್ಯ ಕೊರತೆ ಇರುವವರಿಗೆ ಉಚಿತ ಕೌಶಲ್ಯ ತರಬೇತಿ ನೀಡುವುದು ಯೋಜನೆಯ ಉದ್ದೇಶವಾಗಿದೆ.
ಜಿಲ್ಲೆಯ ನಿರುದ್ಯೋಗಿ ಅಭ್ಯರ್ಥಿಗಳು ಮತ್ತು ಪ್ರಮುಖ ಖಾಸಗಿ ಕಂಪನಿಗಳು https://yuvaudyogasethu.karnataka.gov.in/
ಫೋರ್ಟಲ್ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗೆ ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಅಥವಾ ದೂರವಾಣಿ ಸಂಖ್ಯೆ 9945587060, 7019755147, 7022459064, 8105619020, 7892876162 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.










