ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ₹2,000 ಹೆಚ್ಚಿಸಲು ನಿರ್ಧರಿಸಿದೆ. ಈ ನೂತನ ಹೆಚ್ಚಳವು ಜನವರಿ 1, 2027ರಿಂದ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕೃತವಾಗಿ ಘೋಷಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಸಿಎಂ ಡಿ.ಕೆ. ಶಿವಕುಮಾರ್, “ಆಶಾ ಕಾರ್ಯಕರ್ತೆಯರು ನಮ್ಮ ರಾಜ್ಯದ ಆಸ್ತಿ. ಆರೋಗ್ಯ ಕ್ಷೇತ್ರದಲ್ಲಿ ಅವರು ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆಯನ್ನು ಗೌರವಿಸಿ, ಅವರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ,” ಎಂದು ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರು ನಮ್ಮ ಆಸ್ತಿ:
ಜನವರಿ 1ರಿಂದ ₹2,000 ಮಾಸಿಕ ಗೌರವಧನ ಹೆಚ್ಚಳಆಶಾ ಕಾರ್ಯಕರ್ತೆಯರು ನಮ್ಮ ಆಸ್ತಿ. ಅವರ ಸೇವೆಯನ್ನು ಗೌರವಿಸಿ, ಅವರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ. ಪ್ರಸ್ತುತ ಮಾಸಿಕ ಗೌರವಧನವನ್ನು ₹2,000 ಹೆಚ್ಚಿಸಲು ತೀರ್ಮಾನಿಸಲಾಗಿದ್ದು, ಈ ಹೆಚ್ಚಳವು ಜನವರಿ 1, 2027ರಿಂದ ಜಾರಿಗೆ… pic.twitter.com/DnA69SvvS1
— DK Shivakumar (@DKShivakumar) November 28, 2026
ಹೋರಾಟ ಕೈಬಿಟ್ಟ ಕಾರ್ಯಕರ್ತೆಯರಿಗೆ ಅಭಿನಂದನೆ:
ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರು ಸರ್ಕಾರದ ಮನವಿಗೆ ಸ್ಪಂದಿಸಿ ಹೋರಾಟವನ್ನು ಹಿಂಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ, “ನನ್ನ ಮನವಿಗೆ ಸ್ಪಂದಿಸಿ ಹೋರಾಟವನ್ನು ಕೈಬಿಟ್ಟ ಎಲ್ಲಾ ಆಶಾ ಸಹೋದರಿಯರಿಗೆ ಹೃದಯಪೂರ್ವಕ ಅಭಿನಂದನೆಗಳು. ಆಶಾ ಸಹೋದರಿಯರ ಕಷ್ಟಕ್ಕೆ ಸ್ಪಂದಿಸಿ, ಅವರ ಬದುಕಿನಲ್ಲಿ ಭರವಸೆಯ ಬೆಳಕು ಮೂಡಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ,” ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.











