Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮರ್ಚೆಂಟ್ಸ್ ಸೌಹಾರ್ದ ಬ್ಯಾಂಕ್ ಕೃತಜ್ಞತಾ ಪರ್ವ: ಇಂದು ಸಮಾರೋಪ, ರಾಜೇಶ್ ಕೃಷ್ಣನ್ ತಂಡದಿಂದ ಸಂಗೀತ ರಸಸಂಜೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ನ. 28 : ನಗರದ ಪ್ರತಿಷ್ಠಿತ ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕ್ ನಿಯಮಿತದ ಅಮೃತ ಮಹೋತ್ಸವದ ಕೃತಜ್ಞತಾ ಪರ್ವದ ಅಂಗವಾಗಿ ನ. 29ರ ಭಾನುವಾರ ಸಂಜೆ 6.ಕ್ಕೆ ಹಳೇ ಮಾಧ್ಯಮಿಕ ಶಾಲಾ ಮೈದಾನ ಆವರಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಬ್ಯಾಂಕ್‍ನ ಮುಖ್ಯ ಕಾರ್ಯ ನಿರ್ವಹಕಾ ಧಿಕಾರಿ ಕೆ.ಆರ್.ಮಲ್ಲಿಕಾರ್ಜನ್ ತಿಳಿಸಿದ್ದಾರೆ.

ಸಂಜೆ 6 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭವನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ ರಘುಮೂರ್ತಿ ಉದ್ಘಾಟಿಸಲಿದ್ದಾರೆ. ಬ್ಯಾಂಕಿನ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನವನ್ನು ಸಹಕಾರ ಖಾತೆಯ ಮಾಜಿ ಸಚಿವರಾದ ಕೆ.ಎನ್.ರಾಜಣ್ಣ ನಡೆಸಿಕೊಡ ಲಿದ್ದಾರೆ. ಸದಸ್ಯರಿಗೆ ನೆನಪಿನ ಕಾಣಿಕೆಯನ್ನು ಮಾಜಿ ಉಪ ಮುಖ್ಯ ಮಂತ್ರಿಗಳು ಸಂಸದರಾದ ಗೋವಿಂದ ಎಂ. ಕಾರಜೋಳ ವಿತರಣೆ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಹೊಳಲ್ಕೆರೆ ಶಾಸಕರಾದ ಡಾ.ಎಂ. ಚಂದ್ರಪ್ಪ, ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್ ಆದಿಜಾಂಬವ ಅಭಿವೃದ್ಧಿ ನಿಗಮದ ಅದ್ಯಕ್ಷರಾದ ಜಿ.ಎಸ್.ಮಂಜುನಾಥ್ ಬ್ಯಾಂಕಿನ ನಿಕಟಪೂರ್ವ ಅಧ್ಯಕ್ಷರಾದ ಎಸ್. ಆರ್. ಲಕ್ಷ್ಮೀಕಾಂತ ರೆಡ್ಡಿ ಭಾಗವಹಿಸಲಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ರಘುರಾಮ ರೆಡ್ಡಿ ವಹಿಸಲಿದ್ದಾರೆ. ಸಮಾರೋಪ ಸಮಾರಂಭದ ನಂತರ ರಾಜೇಶ್ ಕೃಷ್ಣನ್ ಮತ್ತು ತಂಡ, ಬೆಂಗಳೂರು, ಇವರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ.

ನ. 29ರ ಬೆಳಿಗ್ಗೆ 10ಕ್ಕೆ ಹಳೇ ಮಾಧ್ಯಮಿಕ ಶಾಲಾ ಮೈದಾನ ಆವರಣದಲ್ಲಿ ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕ್ ನಿಯಮಿತದ ಅಮೃತ ಮಹೋತ್ಸವದ ಕೃತಜ್ಞತಾ ಪರ್ವದ ಅಂಗವಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ ಬ್ಯಾಂಕ್ ಪ್ರಾರಂಭವಾಗಿ 75 ವರ್ಷ ಆದ ಸವಿನೆನಪಿಗಾಗಿ 75 ಯೂನಿಟ್ ರಕ್ತವನ್ನು ಸಂಗ್ರಹ ಮಾಡುವ ಗುರಿಯನ್ನು ಹೊಂದಲಾಗಿದೆ ಈ ಹಿನ್ನಲೆಯಲ್ಲಿ ರಕ್ತವನ್ನು ದಾನ ಮಾಡುವ ದಾನಿಗಳು ಆಗಮಿಸಿ ರಕ್ತವನ್ನು ದಾನ ಮಾಡುವಂತೆ ಮನವಿ ಮಾಡಿದ್ದಾರೆ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ತಮ್ಮ ಹಿತವನ್ನು ಕಾಪಾಡಿಕೊಳ್ಳಲು ಮಾತನಾಡುವ ಶಕ್ತಿ ಇಲ್ಲದವರ ಹಿತರಕ್ಷಣೆಯೇ ಸಹಕಾರ ಸಂಘಗಳ ಮೂಲ ಉದ್ದೇಶ : ಮಾಜಿ ಸಚಿವ ಎಚ್. ಏಕಾಂತಯ್ಯ

ಚಳ್ಳಕೆರೆಯಲ್ಲಿ ಜಿಲ್ಲಾ ಲೇಖಕಿಯರ ಬಳಗದಿಂದ ಕನ್ನಡ ರಾಜ್ಯೋತ್ಸವ ಹಾಗೂ ಕನಕ ಜಯಂತಿ ಆಚರಣೆ

ಗ್ರಾಹಕರೇ ಗಮನಿಸಿ : ಎಲ್‌ಪಿಜಿಯಿಂದ ಪಿಎನ್‌ಜಿಗೆ ಬದಲಾಯಿಸಲು 90 ದಿನಗಳ ಗಡುವು ನೀಡಿದ ಕೇಂದ್ರ ಸರ್ಕಾರ

PM Rahat Scheme: Free treatment for road accident victims from now on; here are the full details

ಕೇಂದ್ರದ ‘ಪಿಎಂ ರಾಹತ್’ ಯೋಜನೆ : ರಸ್ತೆ ಅಪಘಾತದ ಸಂತ್ರಸ್ತರಿಗೆ ₹1.5 ಲಕ್ಷದವರೆಗೆ ನಗದುರಹಿತ ಚಿಕಿತ್ಸೆ

Good news for customers: Price of Nandini curd reduced by Rs 2 per litre; revised rates effective from today.

ಗ್ರಾಹಕರಿಗೆ ಸಿಹಿ ಸುದ್ದಿ: ನಂದಿನಿ ಮೊಸರಿನ ದರ ಲೀಟರ್‌ಗೆ 2 ರೂಪಾಯಿ ಇಳಿಕೆ; ಇಂದಿನಿಂದ ಪರಿಷ್ಕೃತ ದರ ಜಾರಿ

WhatsApp Web users, beware! Serious warning from the Union Ministry of Home Affairs regarding account misuse.

ವಾಟ್ಸ್‌ಆ್ಯಪ್ ಬಳಕೆದಾರರೇ ಎಚ್ಚರ : ನಿಮ್ಮ ಖಾಸಗಿ ಡೇಟಾ ಅಪಾಯದಲ್ಲಿದೆ; ಕೇಂದ್ರ ಸೈಬರ್ ಭದ್ರತಾ ಸಂಸ್ಥೆಯಿಂದ ಗಂಭೀರ ಎಚ್ಚರಿಕೆ