ಚಿತ್ರದುರ್ಗ, (ಮಾ.25) : ಜಿಲ್ಲೆಯ ಎಲ್ಲಾ ಹಿಂಧೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಎಲ್ಲಾ ದೇವಸ್ಥಾನ, ಜಾತ್ರಾ ಮಹೋತ್ಸವ, ರಥೋತ್ಸವ ಮತ್ತು ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹಿಂದೂಯೇತರರಿಗೆ ಅವಕಾಶ ಕೊಡಬಾರದು ಹಾಗೂ ದೇವಸ್ಥಾನಕ್ಕೆ ಸಂಬಂಧ ಪಟ್ಟಂತಹ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಹಿಂದೂಯೇತರರಿಗೆ ಭಾಗವಹಿಸದಿರಲು ಕಾನೂನಿನ ಈ ನಿಯಮದ ಪ್ರಕಾರ ಜಾರಿಗೆ ತರಲು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮ 1997ರ ನಿಯಮಗಳು 2002 ಸಂಖ್ಯೆ: 33ರ ಪ್ರಕಾರ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಪಟ್ಟ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಹಿಂದೂಗಳಲ್ಲದವರಿಗೆ (ಅನ್ಯ ಕೋಮಿನವರಿಗೆ) ಗುತ್ತಿಗೆಯನ್ನು ನೀಡತಕ್ಕದ್ದಲ್ಲ ಎಂಬ ಅಧಿನಿಯಮ ಇದೆ.
ಈ ನಿಯಮದ ಪ್ರಕಾರ ಸ್ಪಷ್ಟವಾಗಿ ಉಲ್ಲೇಖವಿದ್ದ ಕಾರಣ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯು ಕೂಡಲೇ ಜಿಲ್ಲೆಯ ಎಲ್ಲಾ ದೇವಸ್ಥಾನದ ಆಡಳಿತ ಮಂಡಳಿಗೆ ಈ ಆದೇಶವನ್ನು ಹೊರಡಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಿ. ರುದ್ರೇಶ್, ಕೇಶವ್, ಶಶಿಧರ್, ಓಂಕಾರ್, ರೇಣು, ಕಿಶೋರ್, ತೇಜು, ಜಯಂತ್, ದೀಪಕ್ ಹಾಗೂ ಇನ್ನಿತರರು ಭಾಗಿಯಾಗಿದ್ದರು.