Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಕಾತ್ರಾಳ್ ಕೆರೆ ಬಳಿ ರಸ್ತೆ ಅಪಘಾತ, ಮೂವರು ಸಾವು

Facebook
Twitter
Telegram
WhatsApp

ಚಿತ್ರದುರ್ಗ, (ಮಾ.30) : ರಾಷ್ಟ್ರೀಯ ಹೆದ್ದಾರಿ 4 (48) ಕಾತ್ರಾಳ್ ಕೆರೆಯ ಬ್ರಿಡ್ಜ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು ಹಲವರಿಗೆ ಗಾಯಗಳಾಗಿವೆ.

ಜಗಳೂರು ತಾಲ್ಲೂಕು ಕೆಳಗೋಟೆ ಗ್ರಾಮದ 10 ಜನ ಪ್ರಯಾಣಿಕರು ಮಾರಘಟ್ಟ ಗ್ರಾಮಕ್ಕೆ ಸಂಬಂಧಿಕರ ಶವಸಂಸ್ಕಾರಕ್ಕೆ ಹೋಗುವ ವೇಳೆ ಎನ್.ಹೆಚ್.48 ರ ಕಾತ್ರಾಳ್ ಕೆರೆಯ ಬ್ರಿಡ್ಜ್ ಬಳಿ ದಾವಣಗೆರೆ ಕಡೆಯಿಂದ ಚಿತ್ರದುರ್ಗದ ಕಡೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ಈಚರ್ ಲಾರಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.

ಅಪಘಾತ ಸಂಭವಿಸಿ, ಗಂಭೀರವಾಗಿ ಗಾಯಗೊಂಡಿದ್ದವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಹಾಲಪ್ಪ, (70), ರುದ್ರಮ್ಮ(58) ಮತ್ತು ಸಣ್ಣ ಬಸವರಾಜಪ್ಪ, (45) ಇವರು ಚಿಕಿತ್ಸೆ
ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಲ್ಲೇಶಪ್ಪ, ಚಂದ್ರಪ್ಪ, ಪಾರ್ವತಮ್ಮ, ರುದ್ರೇಶಪ್ಪ, ಸಿದ್ದೇಶ ಇವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!