ಚಿತ್ರದುರ್ಗ : ಗ್ರಾಮ ದೇವತೆಗಳಾದ ಅಕ್ಕ-ತಂಗಿ ಬರಗೇರಮ್ಮ ಹಾಗೂ ತಿಪ್ಪಿನಘಟ್ಟಮ್ಮನವರ ಭೇಟಿ ಮಹೋತ್ಸವದ ಪೂಜಾ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಜೋಗಿಮಟ್ಟಿ ರಸ್ತೆಯಲ್ಲಿರುವ ಮೂಲ ದೇವಸ್ಥಾನದಲ್ಲಿ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮನಿಗೆ ಶುಕ್ರವಾರ ಮದಲಿಂಗಿತ್ತಿ ಮತ್ತು ಕಂಕಣಧಾರಣೆ ಶಾಸ್ತ್ರ ಪೂಜಾ ಕಾರ್ಯಕ್ರಮ ಶ್ರದ್ದಾ ಭಕ್ತಿಯಿಂದ ನಡೆಯಿತು.
ವಿಶೇಷವಾಗಿ ತಿಪ್ಪಿನಘಟ್ಟಮ್ಮನನ್ನು ಅಲಂಕರಿಸಿ ಪೂಜೆ ಸಲ್ಲಿಸಿದ ನಂತರ ಉಜ್ಜಯಿನಿ ಮಠದ ರಸ್ತೆಯಲ್ಲಿರುವ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಲಾಯಿತು. ನೂರಾರು ಭಕ್ತರು ದೇವಸ್ಥಾನಕ್ಕೆ ತೆರಳಿ ಭಕ್ತಿ ಸಮರ್ಪಿಸಿದರು.
ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ದೇವಸ್ಥಾನ ಟ್ರಸ್ಟ್‌ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.