ಮೈಸೂರು: ಸಚಿವ ಈಶ್ವರಪ್ಪ ವಿರುದ್ಧ ಗುತ್ತಿಗೆದಾರ ಸಂತೋಷ್ 40% ಕಮೀಷನ್ ಆರೋಪ ಮಾಡಿದ್ದರು. ಆ ಸಂಬಂಧ ಈಶ್ವರಪ್ಪ ದೂರು ಕೂಡ ದಾಖಲಿಸಿದ್ದರು. ಪ್ರಧಾನಿ ಮೋದಿಯವರೆಗೂ ಪತ್ರವನ್ನು ಬರೆದಿದ್ದ ಸಂತೋಷ್ ಪಾಟೀಲ್ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ನೇರ ಕಾರಣ ಎಂದು ಡೆತ್ ನೋಟ್ ಕೂಡ ಬರೆದಿಟ್ಟಿದ್ದಾರೆ.
ಈ ಸಂಬಂಧ ಮಾಧ್ಯಮದವರು ಸಚಿವ ಈಶ್ವರಪ್ಪ ಅವರನ್ನು ಪ್ರಶ್ನಿಸಿದಾಗ, ಯಾರು ಯಾರು ಆತ್ಮಹತ್ಯೆ ಮಾಡಿಕೊಂಡಿದ್ದಾರಾ..? ಯಾಕೆ..? ನನ್ನ ಮೇಲೆ ಆರೋಪ ಮಾಡಿದ್ದರು. ನಾನು ಕೇಸ್ ಹಾಕಿದ್ದೆ. ನನ್ನ ಹೆಸರು ಯಾಕೆ ಡೆತ್ ನೋಟ್ ನಲ್ಲಿ ನನ್ನ ಹೆಸರು ಯಾಕೆ ಬರೆದಿದ್ದಾರೋ ಗೊತ್ತಿಲ್ಲ. ಅವರನ್ನೇ ಕೇಳೋಕೆ ಅವರಿಲ್ಲ. ನಂಗೆ ಈ ಬಗ್ಗೆ ಏನು ಗೊತ್ತಿಲ್ಲ ಎಂದಿದ್ದಾರೆ.
ಇನ್ನು ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿರುವುದರಿಂದ ಈಶ್ವರಪ್ಪ ರನ್ನು ಅರೆಸ್ಟ್ ಮಾಡಿ, ಸಚಿವ ಸ್ಥಾನದಿಂದ ವಜಾಗೊಳಿಸವೇಕೆಂದು ಕಾಂಗ್ರೆಸ್ ನಾಯಕರು ಒತ್ತಾಯ ಹಾಕುತ್ತಿದ್ದಾರೆ.