ನವದೆಹಲಿ: 40% ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ನನ್ನ ಸಾವಿಗೆ ನೇರ ಕಾರಣ ಸಚಿವ ಈಶ್ಚರಪ್ಪ ಅವರು ಎಂದು ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್ ನಾಯಕರು ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕೆಂದು ಪಟ್ಟು ಹಿಡಿದಿದ್ದಾರೆ.
ಇಂದು ದೆಹಲಿಯಲ್ಲಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬಿಜೆಪಿ ಕಾರ್ಯಕರ್ತನೇ 40% ಕಮೀಷನ್ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಆರೋಪ ಹೊತ್ತಿರುವ ಈಶ್ವರಪ್ಪ ತಮ್ಮ ಸ್ಥಾನಕ್ಕೆ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಜೆಪಿ ನಡ್ಡಾ, ಬಿ ಎಲ್ ಸಂತೋಷ್ ಮನೆ ಮುಂದೆಯೂ ಪ್ರತಿಭಟಿಸಿ ಮುತ್ತಿಗೆಗೆ ಯತ್ನಿಸಿದ್ದಾರೆ.
ಸೂಟ್ ಕೇಸ್ ಹಿಡಿದು ಪ್ರತಿಭಟಿಸಿದ ಕಾರ್ಯಕರ್ತರು, ಈಶ್ವರಪ್ಪ ಅವರನ್ನು ಬಂಧನ ಮಾಡುವಂತೆ ಆಗ್ರಹಿಸಿದ್ದಾರೆ. ಸ್ಥಳದಲ್ಲಿ ಪರಿಸ್ಥಿತಿ ಬಿಗಾಡಾಯಿಸುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.