Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮಾಜಮುಖಿ ಕೆಲಸಗಳಿಗೆ ಪರಮಾತ್ಮನ ಅನುಗ್ರಹ ದೊರೆಯುತ್ತದೆ : ತಹಶೀಲ್ದಾರ್ ಎನ್. ರಘುಮೂರ್ತಿ

Facebook
Twitter
Telegram
WhatsApp

 

ಚಳ್ಳಕೆರೆ : ಸಮಾಜದಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವಾದಲ್ಲಿ ಭಗವಂತನು ಅಂತಹ ವ್ಯಕ್ತಿಗಳನ್ನು ಕಷ್ಟಕಾಲದಲ್ಲಿ ಕೈ ಬಿಡುವುದಿಲ್ಲವೆಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು.

ನಗರದಲ್ಲಿ ಮಹಾವೀರ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ಜೈನ ಸಮಾಜದವರು ಸಾರ್ವಜನಿಕ ಆಸ್ಪತ್ರೆಯ ಬಡರೋಗಿಗಳಿಗೆ ಬ್ರೆಡ್ ಹಾಲು ಮತ್ತು ಹಣ್ಣು ವಿತರಿಸುವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಡಿವಿಜಿಯವರು ಹೇಳಿದ ಹಾಗೆ ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗು ಕಲ್ಲಾಗು ಕಷ್ಟಗಳ ಮಳೆ ವಿಧಿ ಸುರಿಯೆ ಕಲ್ಲು ಸಕ್ಕರೆಯಾಗು ದೀನದುರ್ಬಲರಿಂಗೆ ಎಲ್ಲರೊಳಗೊಂದಾಗು ಮಂಕುತಿಮ್ಮ ಎಂಬ ಸಂದೇಶ ಇವತ್ತಿನ ಸಮಾಜಕ್ಕೆ ಸ್ಪೂರ್ತಿ ಮತ್ತು ದಾರಿದೀಪವಾಗಿದೆ.

ಸಮಾಜಮುಖಿ ಕೆಲಸಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡಲ್ಲಿ ಪರಮಾತ್ಮನ ಅನುಗ್ರಹ ದೊರೆಯುತ್ತದೆ. ಜೈನ ಸಮಾಜ ಸಮುದಾಯದವರು ಮಾಡುತ್ತಿರುವಂತಹ ಈ ಮಹತ್ಕಾರ್ಯ ಸತ್ ಕಾರ್ಯವಾಗಿದೆ. ಸಮಾಜದಲ್ಲಿ ಅದೆಷ್ಟೋ ಜನ ಅನ್ನ ಬಟ್ಟೆ  ಸೂರು ಇಲ್ಲದೆ ಬದುಕುತ್ತಿದ್ದಾರೆ.

ಇವರಿಗೆ ಅವಶ್ಯಕ ನೆರವನ್ನು ಒದಗಿಸಿ ಸಾರ್ಥಕತೆಯನ್ನು ಪಡೆಯೋಣ. ಹಾಗೆಯೇ ಹೆಚ್ಚು ಹೆಚ್ಚು ಸಂಘ-ಸಂಸ್ಥೆಗಳು ಮತ್ತು ಸಮುದಾಯದ ಜನ ಇಂತಹ ಮಹತ್ಕಾರ್ಯ ಗಳಿಗೆ ಭಾಗಿಯಾಗಿ ಎಂದು ಕರೆ ಕೊಟ್ಟರು.

ಈ ಸಮಾರಂಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ತಿಪ್ಪೇಸ್ವಾಮಿ ಜೈನ ಸಮುದಾಯದ ಅಧ್ಯಕ್ಷರಾದ ಭರತ್ ರಾಜು,  ದರ್ಶನ್,  ಮುತ್ತರಾಜು,  ನವೀನ್,   ರತ್ನರಾಜು, ರಾಘವೇಂದ್ರ,  ಹಿತೇಶ್, ಉತ್ತಮ್ ಮತ್ತು ಗೌರಿಪುರ ಪಾರ್ಶ್ವನಾಥ ಜೈನ್ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ..!

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನವಣೆ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಇಂದು ಮತ ಎಣಿಕೆ ಕಾರ್ಯದಲ್ಲಿ ಸದ್ಯದ ಸ್ಥಿತಿಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಮೂರು ಕ್ಷೇತ್ರದಲ್ಲೂ ಕಾಂಗ್ರೆಸ್ ಮುಂದಿದೆ. ಸಿಪಿ ಯೋಗೀಶ್ವರ್ : 45,982

ಸಿಪಿ ಯೋಗೀಶ್ವರ್ ವರ್ಸಸ್ ನಿಖಿಲ್ ಕುಮಾರಸ್ವಾಮಿ: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಮುನ್ನಡೆ ..!

ಚನ್ನಪಟ್ಟಣ: ರಾಜ್ಯದಲ್ಲಿ ಇಂದು ಮೂರು ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಬೆಳಗ್ಗೆಯಿಂದಾನೇ ನಡೆಯುತ್ತಿದೆ. ಚನ್ನಪಟ್ಟಣ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿತ್ತು. ಎಲ್ಲರ ಚಿತ್ತ ಇಂದು ಅತ್ತ ಕಡೆಯೇ ನೆಟ್ಟಿದೆ‌. ಮತ ಎಣಿಕೆ ನಡೆಯುತ್ತಿದ್ದು, ಸದ್ಯದ

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

error: Content is protected !!