ಪಿಎಸ್ಐ ಆಯ್ತು ಬಮೂಲ್ ಆಯ್ತು.. ಇದೀಗ PWD JE ಪರೀಕ್ಷೆಯಲ್ಲೂ ಅಕ್ರಮದ ವಾಸನೆ.. ಆದರೆ ಕ್ರಮವಿಲ್ಲ..!

suddionenews
1 Min Read

ಕಲಬುರಗಿ : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಹಲವು ಕೆಲವೊಂದು ಇಲಾಖೆಗಳಲ್ಲಿ ಅಕ್ರಮ ನಡೆದಿರುವ ಬಗ್ಗೆಯೇ ವಾಸನೆ ಬರುತ್ತಿದೆ. ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದ್ದು, ಅದರ ತನಿಖೆ ನಡೆತುತ್ತಿದೆ. ಈಗಾಗಲೇ ಸಾಕಷ್ಟು ಜನ ಆರೋಪಿಗಳನ್ನು ಅರೆಸ್ಟ್ ಮಾಡಲಾಗುತ್ತಿದೆ. ಈ ಬೆನ್ನಲ್ಲೇ ಬಮೂಲ್ ನಲ್ಲೂ ಅಕ್ರಮ ನಡೆದಿದೆ ಎನ್ನಲಾಗಿದೆ.

ನಿನ್ನೆಯೆಲ್ಲಾ ಬಮೂಲ್ ಪರೀಕ್ಷೆಯಲ್ಲಿ ನಡೆದ ಅಕ್ರಮದ್ದೆ ಸದ್ದು ಕೇಳಿ ಬಂದಿದೆ.ಸಂಸದ ಸುರೇಶ್ ಕುಮಾರ್ ಈ ಸಂಬಂಧ ಲಿಖಿತ ರೂಪದಲ್ಲಿ ದೂರು ನೀಡಿದ್ದಾರೆ. ಮತ್ತೆ ಪರೀಕ್ಷೆ ನಡೆಸಲು ಮನವಿ ಮಾಡಿದ್ದಾರೆ. ಈ ಬೆನ್ನಲ್ಲೇ PWD ಇಲಾಖೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ವಿಡಿಯೋ ಸಮೇತ ಬಯಲಾಗಿದೆ.

ಕಳೆದ ಡಿಸೆಂಬರ್ 13ರಂದು PWD ಇಅಲಖೆಯ ಜೆಇ ಪರೀಕ್ಷೆ ನಡೆದಿದೆ. ಪರೀಕ್ಷೆಯಲ್ಲಿ ವ್ಯಕ್ತಿಯೊಬ್ಬ ಲಾಡ್ಜ್ ನಲ್ಲಿ ಕುಳಿತು ಉತ್ತರ ಹೇಳಿಕೊಡುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು. ಅವಧಿಗೂ ಮುನ್ನವೇ ಜೆಇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದರ ಬಗ್ಗೆ ಈ ವಿಡಿಯೋ ಸಾಕ್ಷಿಯಾಗಿದೆ. ಆದರೆ ಇಷ್ಟೆಲ್ಲಾ ಸಾಕ್ಷಿಗಳಿದ್ದರೂ ಸರ್ಕಾರ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಎದ್ದಿದೆ.

Share This Article
Leave a Comment

Leave a Reply

Your email address will not be published. Required fields are marked *