ಮೈಸೂರು: ಸಾಧನೆಗೆ, ಸೇವೆಗೆ, ಪತ್ರಿಕೋದ್ಯಮದ ಯಶಸ್ಸಿಗೆ ಈಗಾಗಲೇ ಸಾಕಷ್ಟು ಪ್ರಶಸ್ತಿಗಳು ಆನಂದ್ ಸಂಕೇಶ್ವರ್ ಅವರಿಗೆ ಧಕ್ಕಿದೆ. ಇದೀಗ ಕರ್ನಾಟಕದ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಮುಕ್ತಗಂಗೋತ್ರಿಯ ಘಟಿಕೋತ್ಸವ ಭವನದಲ್ಲು ಕಾರ್ಯಕ್ರಮದಲ್ಲಿ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ. 17ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಆನಂದ್ ಸಂಕೇಶ್ವರದ ಸೇರಿದಂತೆ ಹಲವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಘಟಿಕೋತ್ಸವದಲ್ಲಿ 31 ಸಂಶೋಧನಾ ಅಭ್ಯರ್ಥಿಗಳಿಗೆ ಪಿಎಚ್ಡಿ ಪದವು, 48 ಮಂದಿಗೆ ಚಿನ್ನದ ಪದಕ, 38 ಅಭ್ಯರ್ಥಿಗಳಿಗೆ ನಗದು ಬಹುಮಾನ. 8,338 ವಿದ್ಯಾರ್ಥಿಗಳಿಗೆ ವಿವಿಧ ಪದವಿ ಪ್ರಧಾನ ಮಾಡಲಾಗಿದೆ.