Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಡ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ಮುಟ್ಟಿಸಿದಾಗ ಮಾತ್ರ ಸರ್ಕಾರದ ಕಾರ್ಯಕ್ರಮಗಳು ಸಫಲವಾಗುತ್ತವೆ : ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

Facebook
Twitter
Telegram
WhatsApp

ಚಿತ್ರದುರ್ಗ, (ಏ.26): ಸರ್ಕಾರದ ಯೋಜನೆಗಳು ಸಫಲವಾಗಬೇಕಾದರೆ ಅಧಿಕಾರಿಗಳು ಮನೆ ಮನೆಗೆ ಹೋಗಿ ಹುಡುಕಿ ಬಡ ಫಲಾನುಭವಿಗಳಿಗೆ ಮುಟ್ಟಿಸಿದಾಗ ಮಾತ್ರ ಸರ್ಕಾರದ ಕಾರ್ಯಕ್ರಮಗಳು ಸಫಲವಾಗುತ್ತವೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು.

ಕಂದಾಯ ಇಲಾಖೆ ವತಿಯಿಂದ ತ.ರಾ.ಸು.ರಂಗಮಂದಿರದಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಮಂಗಳವಾರ ಏರ್ಪಡಿಸಲಾಗಿದ್ದ ಚಿತ್ರದುರ್ಗ ತಾಲ್ಲೂಕು ಕಸಬಾ ಹೋಬಳಿ ಮಟ್ಟದ ವಿವಿಧ ಸವಲತ್ತುಗಳ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದರು.

ಹಳ್ಳಿಗಾಡಿನಲ್ಲಿ ಅನೇಕರಿಗೆ ಇನ್ನು ಸರ್ಕಾರದ ಯೋಜನೆಗಳು ಸರಿಯಾಗಿ ತಲುಪಿಲ್ಲ. ವಯಸ್ಸಾದವರು, ವಿಧವೆಯರು, ನಾನಾ ಕಾರಣಗಳಿಂದ ಕಾಯಿಲೆಯಿಂದ ಬಳುತ್ತಿರುವವರಿಗೆ ಮುಪ್ಪಿನ ಕಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗಬಾರದೆನ್ನುವ ಉದ್ದೇಶದಿಂದ ಹಳ್ಳಿಗಾಡಿನಲ್ಲಿ ಪ್ರತಿ ಮನೆ ಮನೆಗೆ ಹೋಗಿ ಬಡವರನ್ನು ಹುಡುಕಿ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸದ್ದರ ಫಲವಾಗಿ 700 ಆದೇಶ ಪತ್ರಗಳನ್ನು ವಿತರಿಸುತ್ತಿದ್ದೇವೆ.

ಇದು ನನಗೆ ಅತ್ಯಂತ ಸಂತೋಷವನ್ನುಂಟು ಮಾಡಿದೆ. ಇದರಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಶ್ರಮವಿದೆ. ಎರಡು ವರ್ಷಗಳಿಂದ ಕೊರೋನಾದಲ್ಲಿ ಸಾಕಷ್ಟು ಸಾವು-ನೋವುಗಳು ಸಂಭವಿಸಿದ್ದು, ಬಡವರು ಯಾರು ಹಸಿವಿನಿಂದ ನರಳಬಾರದೆಂದು ದೇಶದ ಪ್ರಧಾನಿ ನರೇಂದ್ರಮೋದಿರವರು ಭಾರತದಲ್ಲಿ ಎಂಬತ್ತು ಕೋಟಿ ಜನರಿಗೆ ಉಚಿತವಾಗಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಧಾನ್ಯಗಳನ್ನು ನೀಡಿದ್ದಾರೆ.

ಜಗತ್ತಿನಲ್ಲಿ ಬೇರೆ ಯಾವ ದೇಶದವರು ಬಡವರಿಗೆ ಈ ರೀತಿಯ ಸವಲತ್ತುಗಳನ್ನು ಕೊಟ್ಟಿಲ್ಲ. ಬಡವರು ಇದರ ಪ್ರಯೋಜನ ಪಡೆದುಕೊಂಡು ನೆಮ್ಮದಿಯಾಗಿ ಜೀವಿಸುವಂತೆ ಹೇಳಿದರು.

ಉಪವಿಭಾಗಾಧಿಕಾರಿ ಚಂದ್ರಯ್ಯ, ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ, ಉಪ ತಹಶೀಲ್ದಾರ್ ಫಾತಿಮ, ಕಂದಾಯ ನಿರೀಕ್ಷಕ ಶರಣಪ್ಪ, ಬಿಜೆಪಿ.ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಸಿದ್ದೇಶ್‍ಯಾದವ್ ಇನ್ನು ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!