ಕೆ.ತಿಪ್ಪೇಸ್ವಾಮಿ(ಟೈಗರ್) ಯವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ರಾಜ್ಯ ಮಟ್ಟದ ಕಾಯಕಯೋಗಿ ಪ್ರಶಸ್ತಿ

suddionenews
1 Min Read

ಚಿತ್ರದುರ್ಗ, (ಏ.26): ಡಾ. ಹುಲಿಕಲ್ ನಟರಾಜ್ ಸ್ಥಾಪಿತ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದೊಡ್ಡಬಳ್ಳಾಪುರ, ಬೆಂಗಳೂರು ರಾಜ್ಯ ಮಟ್ಟದಲ್ಲಿ ಮೇ1 ರಂದು ಕಾರ್ಮಿಕ ದಿನಾಚರಣೆ ಅಂಗವಾಗಿ ಸಾರ್ವಜನಿಕ ವಲಯದಲ್ಲಿ ನಿರಂತರವಾಗಿ ಕಾಯಕದಲ್ಲಿ ತೊಡಗಿ ಜನಸೇವೆ ಮಾಡುತ್ತಿರುವವರನ್ನು ಪ್ರತಿ ಜಿಲ್ಲೆಯಲ್ಲಿ ಒಬ್ಬರಂತೆ ಗುರುತಿಸಿ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನೀಡಲಾಗುತ್ತದೆ.

ಅದರಂತೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಡಿವಾಳ ಸಮಾಜದ ಕಾಯಕಯೋಗಿಯಾಗಿ ಕರ ಸೇವೆಯಲ್ಲಿ ಭಾಗವಹಿಸಿದ್ದ ಹಾಗೂ ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಮತ್ತು ನಗರಸಭೆ ಸದಸ್ಯರಾಗಿ ಸೇವೆ ಸಲ್ಲಿಸಿ ಅಂದಿನಿಂದ ಇಂದಿನವರೆಗೂ ತಮ್ಮ ಕಾಯಕ ವೃತ್ತಿಯನ್ನು ತಪ್ಪದೆ ಪಾಲಿಸಿಕೊಂಡು ಸಾರ್ವಜನಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ನಿರಂತರವಾಗಿ ಕಾಯಕ ಮಾಡುತ್ತಿರುವ ಕೆ.ತಿಪ್ಪೇಸ್ವಾಮಿ(ಟೈಗರ್) ರವರು ಚಿತ್ರದುರ್ಗ ಜಿಲ್ಲೆಯಿಂದ ರಾಜ್ಯ ಮಟ್ಟದ ಕಾಯಕಯೋಗಿ ಪ್ರಶಸ್ತಿಗೆ ಭಾಜನರಾಗಿರುತ್ತಾರೆ. ಇವರಿಗೆ ಮೇ.1 ರಂದು ಪ್ರಶಸ್ತಿ ನೀಡಿ ಗೌರವಿಸಲಾಗುವುದು.

 

ಮೇ.1 ರಂದು ಬೆಳಿಗ್ಗೆ 10 ಕ್ಕೆ ಬೆಂಗಳೂರಿನ ವಿಜಯನಗರದಲ್ಲಿರುವ ಸುಜ್ಞಾನ ಕಲ್ಯಾಣ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ರಾಜ್ಯಾಧ್ಯಕ್ಷರಾದ ಡಾ.ಹುಲಿಕಲ್ ನಟರಾಜ್, ನಾಡಿನ ಪ್ರಗತಿಪರ ಚಿಂತಕರು, ಶರಣರು, ವಿಜ್ಞಾನಿಗಳು, ವೈದ್ಯರು, ಉಪನ್ಯಾಸಕರುಗಳು ಮತ್ತು ಇತರೆ ಗಣ್ಯರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಜಿಲ್ಲಾಧ್ಯಕ್ಷರಾದ ನಾಗರಾಜ್ ಸಂಗಮ್, ಕಾರ್ಯದರ್ಶಿ ಪಿ.ಲೋಕೇಶ್ ಇವರುಗಳು ಕೋರಿದ್ದಾರೆ.


ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಈ ಕೆಳಕಂಡ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
8747825425, 9448664710.

Share This Article
Leave a Comment

Leave a Reply

Your email address will not be published. Required fields are marked *