Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೇ. 3 ರಂದು ಪುನೀತ್ ರಾಜಕುಮಾರ್ ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಪ್ರದಾನ

Facebook
Twitter
Telegram
WhatsApp

ಚಿತ್ರದುರ್ಗ,(ಮೇ. 2) : ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 3 ರಂದು ಬೆಳಗ್ಗೆ 11 ಗಂಟೆಗೆ ಬಸವ ಜಯಂತಿ ಅಂಗವಾಗಿ ಸರ್ವಶರಣ, ಸಂತ ಮತ್ತು ದಾರ್ಶನಿಕರ ಸ್ಮರಣೆ ಹಾಗೂ ಹೆಸರಾಂತ ನಟ ಮತ್ತು ಸಾಂಸ್ಕೃತಿಕ ರಾಯಭಾರಿ ಡಾ. ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.

ಡಾ. ಶಿವಮೂರ್ತಿ ಮುರುಘಾ ಶರಣರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೃಷಿ ಸಚಿವ ಬಿ.ಸಿ. ಪಾಟೀಲ್, ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ಹೆಸರಾಂತ ಚಲನಚಿತ್ರ ನಟರಾದ ಡಾ. ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಅವರುಗಳು ಮುಖ್ಯಅತಿಥಿಗಳಾಗಿ ಭಾಗವಹಿಸುವರು.

ಹಿರಿಯ ಸಾಹಿತಿ ಡಾ. ರಾಜಪ್ಪ ದಳವಾಯಿ ಬಸವಶ್ರೀ ಪ್ರಶಸ್ತಿ ಪುರಸ್ಕೃತರ ಕುರಿತು ಮಾತನಾಡುವರು. ಜಿಲ್ಲಾಧಿಕಾರಿ ಶ್ರೀಮತಿ ಕವಿತಾ ಎಸ್. ಮನ್ನೀಕೇರಿ ಮತ್ತು ಚಿತ್ರೋದ್ಯಮಿ ಚಿನ್ನೇಗೌಡರು ಉಪಸ್ಥಿತರಿರುವರು. ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!