Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ವಾತಂತ್ರ್ಯ ಬಂದು 75 ವರ್ಷವಾದರೂ ದೇಶದ್ರೋಹ ಕಾನೂನಿನ ಅಗತ್ಯವಿದೆಯಾ..? : ಕೇಂದ್ರ ಸರ್ಕಾರಕ್ಕೆ ಪ್ರಶ್ನಿಸಿದ ಸುಪ್ರೀಂ

Facebook
Twitter
Telegram
WhatsApp

ನವದೆಹಲಿ: ದೇಶದ್ರೋಹ ಕಾಯ್ದೆಯ ಅರ್ಜಿ ವಿಚಾರಣೆ ನಡೆದಿದ್ದು, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಭಾರತದ ಮುಖ್ಯ ನ್ಯಾಯಾಮೂರ್ತಿ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸೂರ್ಯಕಾಂತ್ ಪೀಠವೂ ಈ ಪ್ರಶ್ನೆ ಮಾಡಿದೆ. ಕೋರ್ಟ್ ನ ಪ್ರಶ್ನೆಗೆ ಉತ್ತರ ನೀಡಲು ಕೇಂದ್ರ ಸರ್ಕಾರ ಇನ್ನೊಂದು ವಾರಗಳ ಕಾಲಾವಕಾಶ ಪಡೆದುಕೊಂಡಿದೆ.

ಈ ಹಿಂದೆಯೆ ಈ ಕಾಯ್ದೆ ಬಗ್ಗೆ ಕೋರ್ಟ್ ಹೇಳಿತ್ತು. ಸೆಕ್ಷನ್ 124ಎ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕಲು ಬ್ರಿಟಿಷರಿಂದ ಬಳಸಲ್ಪಟ್ಟ ಒಂದು ನಿಬಂಧನೆಯಾಗಿದೆ‌. ಆದರೆ ಈಗ ದೇಶದ್ರೋಹ ಕಾಯ್ದೆ ದುರ್ಬಳಕೆಯಾಗುತ್ತಿದೆ. ಇದೊಂದು ಬ್ರಿಟಿಷರ ಕಾಲದ ಕಾನೂನು. ಸ್ವಾತಂತ್ರ್ಯ ಲಭಿಸಿ 75 ವರ್ಷವಾದರೂ ಈ ಕಾನೂನಿನ ಅಗತ್ಯವಿದೆಯಾ ಎಂದು ಪ್ರಶ್ನಿಸಿದೆ. ದೇಶದ್ರೋಹ ಕಾನೂನಿನಡಿ ಮಹಾತ್ಮಗಾಂಧೀಜಿ, ಬಾಲಗಂಗಾಧರ ತಿಲಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದು ಬ್ರಿಟಿಷರ ಕಾಲದ ಕಾನೂನು ಎಂದಿದೆ.

ಕರ್ನಾಟಕ ಮೂಲದ ಎಸ್ ಜಿ ಒಂಭತ್ತಕೆರೆ ಎಂಬುವವರು ಈ ಕುರಿತು ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿತ್ತು. ಇದೀಗ ಮತ್ತೆ ವಿಚಾರಣೆ ನಡೆಸಿದ ಬಳಿಕ ಕೇಂದ್ರ ಸರ್ಕಾರ ಕಾಲಾವಾಕಾಶಕ್ಕೆ ಮನವಿ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

error: Content is protected !!