ಉಡುಪಿ: ಮಾಜಿ ಸಚಿವ ಮದ್ವರಾಜ್ ಬಿಜೆಪಿ ಸೇರಲಿದ್ದಾರೆ ಎಂಬ ಗುಸುಗುಸ ಪಿಸು ಪಿಸು ನಡುವೆಯೇ ಇದೀಗ ಕಾಂಗ್ರೆಸ್ ಗೆ ಮದ್ವರಾಜ್ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
ಕಳೆದ ಕೆಲವು ದಿನಗಳಿಂದಲೂ ಇಂಥದ್ದೊಂದು ಸುದ್ದಿ ಹರಿದಾಡುತ್ತಿತ್ತು. ಇದೀಗ ಮದ್ವರಾಜ್ ಬಿಜೆಪಿ ಸೇರುವುದು ಪಕ್ಕಾ ಆಗಿದೆ. ಬಿಜೆಪಿ ವರಿಷ್ಠರ ಸಮ್ಮುಖದಲ್ಲಿ ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂಬ ಮತುಗಳು ಕೇಳಿ ಬರುತ್ತಿದೆ.
ಉಡುಪಿ ಕ್ಷೇತ್ರವನ್ನು ಪ್ರತಿನಿಧಿಸುವ ಮದ್ವರಾಜ್ ಈ ಹಿಂದೆ ಮದ್ವರಾಜ್, ಮೀನುಗಾರಿಕಾ ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಸಚಿವರಾಗಿ ಕೆಲಸ ಮಾಡಿದ್ದರು. ಸದ್ಯ ರಾಜಕೀಯ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.