ಉಡುಪಿ: ಮಳೆಗಾಲ ಶುರುವಾಗಿದೆ. ಇದರ ನಡುವಡಯೇ ಸಾಂಕ್ರಾಮಿಕ ರೋಗಗಳು ಕಾಟ ಕೊಡಲು ಶುರು ಮಾಡಿವೆ. ಉಡುಪಿ ಜಿಲ್ಲೆಯಲ್ಲಿ ಇದೀಗ ಡೆಂಘ್ಯೂ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಆಸ್ಪತ್ರೆಗಳಲ್ಲಿ ಡೆಂಗ್ಯೂ ಸೊಂಕಿತರಿಂದ ಬೆಡ್ ಗಳು ಫುಲ್ ತುಂಬಿ ಹೋಗಿದೆ.
ಬೈಂದೂರು ತಾಲೂಕಿನಲ್ಲಿ ಡೆಂಗ್ಯೂ ಹೆಚ್ಚಾಗಿದ್ದು, ಸರ್ಕಾರಿ ಆಸ್ಪತ್ರೆ ಯಲ್ಲಿ ಸುಮಾರು 50ಕ್ಕೂ ಹೆಚ್ಚು ರೋಗಿಗಳು ದಾಖಲಾಗಿದ್ದಾರೆ. ಉಡುಪಿ ಜಿಕ್ಕಾಸ್ಪತ್ರೆಯಲ್ಲಿ ಹೆಚ್ಚಿನ ವ್ಯವಸ್ಥೆ ಮಾಡಲಾಗಿದೆ. ಸಾಕಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗಿದೆ.
ಇನ್ನು ಮುಂಜಾಗ್ರತೆ ವಹಿಸಿರುವ ಜಿಲ್ಲಾಡಳಿತ, ಡೆಂಗ್ಯೂ ಸೋಂಕಿತರಿಗೆ ವಿಶೇಷ ವಾರ್ಡ್ ತೆರೆದು ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದ್ದಾರೆ. ಜಡ್ಕಲ್ ಗ್ರಾಮಕ್ಕೆ ಆಂಬ್ಯುಲೆನ್ಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಯೋಗ ಕ್ಷೇಮ ವಿಚಾರಿಸಿದ್ದಾರೆ. ಅಷ್ಟೇ ಅಲ್ಲ ವೈದ್ಯರಿಗೆ ಸರಿಯಾದ ಚಿಕಿತ್ಸೆ ನೀಡಲು ಸೂಚಿಸಿದ್ದಾರೆ. ಮಳೆಗಾಲವೂ ಆಗಿರುವ ಕಾರಣ ಸ್ವಲ್ಪ ಎಚ್ಚರಿಕೆಯಿಂದ ಇರುವುದು ಒಳ್ಳೆಯದು ಎಂಬ ಸೂಚನೆಯನ್ನು ವೈದ್ಯರು ನೀಡಿದ್ದಾರೆ