ಈಗಾಗಲೇ ಕಳೆದ ಕೆಲವು ದಿನಗಳಿಂದ ರಾಜ್ಯದೆಲ್ಲೆಡೆ ಮಳೆಯಾಗುತ್ತಿದೆ. ಇನ್ನು ಮೂರು ದಿನ ಮಳೆಯಾಗುವ ಸೂಚನೆ ನೀಡಲಾಗಿದೆ. ಈ ಹಿನ್ನೆಲೆ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಿಗೂ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಅದರಲ್ಲೂ ಮೇ 18ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದಿರಲು ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಭಾಗದಲ್ಲೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆಗಳು, ಸಮುದ್ರದ ತೀರಗಳಿಗೆ ಮಕ್ಕಳು ಹೋಗದಂತೆ ಪೋಷಕರು ಎಚ್ಚರವಹಿಸಲು ಸೂಚಿಸಲಾಗಿದೆ. ಇನ್ನು ಅಲರ್ಟ್ ಘೋಷಣೆಯಾದ ಬಳಿಕ ಮೀನುಗಾರರು ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ.
ಆರು ದಿನಕ್ಕೂ ಮುನ್ನವೆ ನೈರುತ್ಯ ಮುಂಗಾರು ಆಗಮಿಸಿದೆ. ತಮಿಳುನಾಡಿನಲ್ಲಿ ಮೊದಲು ಬಳಿಕ ಲಕ್ಷದ್ವೀಪದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೇ 17ಕ್ಕೆ ಆರೆಂಜ್ ಅಲರ್ಟ್ ನೀಡಿದ್ದು, ಮೇ 19 ರಿಂದ 21ರವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಜನ ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ.