ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಮಳೆಯಾಗುತ್ತಿದೆ. ನಿನ್ನೆಯೆಲ್ಲಾ ಕೆಲವೆಡೆ ಮಳೆ ಹದವಾಗಿ ಬಿದ್ದರೆ, ಮತ್ತೆ ಕೆಲವೆಡೆ ಮೋಡ ಕವಿದ ವಾತಾವರಣವಿತ್ತು. ಆದರೆ ಇಂದು ಬೆಳ್ಳ ಬೆಳಗ್ಗೆಯೇ ಬೆಂಬಿಡದೆ ಮಳೆ ಸುರಿಯುತ್ತಲೆ ಇದೆ. ಸಂಜೆ ವೇಳೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಶಿವಮೊಗ್ಗ, ಮಂಡ್ಯ, ಮೈಸೂರು ಭಾಗದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಳೆಯ ಅಬ್ಬರ ಹೆಚ್ಚಾಗುವುದರಿಂದ ಹವಮಾನ ಇಲಾಖೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ ಮಾಡಿದೆ. ಸುರಕ್ಷತಾ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಆಯಾ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಕೆಲವೊಂದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಕೋಲಾರ, ದಾವಣಗೆರೆ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಕೊಪ್ಪಳ, ವಿಜಯಪುರ, ಬಳ್ಳಾರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.