ಚಿತ್ರದುರ್ಗ, (ಮೇ.19) : ನಗರದ ಹೊರವಲಯದ ಎಸ್.ಜೆ.ಎಮ್.ಆಂಗ್ಲಮಾಧ್ಯಮ ಶಾಲೆಯು 2021-22 ನೇ ಸಾಲಿನ
10 ನೇ ತರಗತಿ ರಾಜ್ಯ ಪಠ್ಯಕ್ರಮದಲ್ಲಿ ಶೇ.
100 % ಉತ್ತಮ ಫಲಿತಾಂಶ ಪಡೆದಿದೆ.
ಪರೀಕ್ಷೆಗೆ ಹಾಜರಾದ ಒಟ್ಟು 44 ವಿದ್ಯಾರ್ಥಿಗಳಲ್ಲಿ 7 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು 34 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ , ಉಳಿದ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.
ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಎಸ್ ಜೆ ಎಮ್ ವಿದ್ಯಾಪೀಠದ ಅಧ್ಯಕ್ಷರಾದ ಪರಮಪೂಜ್ಯ ಡಾ. ಶಿವಮೂರ್ತಿ ಮುರುಘಾ ಶರಣರು , ಕಾರ್ಯದರ್ಶಿಗಳಾದ ಎಸ್ ಕೆ ಬಸವರಾಜನ್ ರವರು, ಜಂಟಿ ಕಾರ್ಯದರ್ಶಿಗಳಾದ ಎ ಜೆ ಪರಮಶಿವಯ್ಯ ರವರು
ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಪುಷ್ಪವಲ್ಲಿ ಎನ್.ಎಮ್. ರವರು ,
ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದಿಸಿದ್ದಾರೆ.