Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಪ್ಲೋಮಾ ಡಿಟಿಡಿಎಂ, ಡಿಎಂಸಿಹೆಚ್ ಕೋರ್ಸ್ ಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭ

Facebook
Twitter
Telegram
WhatsApp

ಚಿತ್ರದುರ್ಗ,(ಮೇ 20) : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಚಿತ್ರದುರ್ಗದಲ್ಲಿ ಡಿಪ್ಲೊಮಾ ಕೋರ್ಸ್ಗಳಾದ “ಡಿಪ್ಲೊಮಾ ಇನ್‌ಟೂಲ್ ಅಂಡ್ ಡೈ ಮೇಕಿಂಗ್” (ಆಖಿಆಒ) ಮತ್ತು “ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್” (ಆಒಅಊ) ವಿಷಯಗಳಿಗೆ ಪ್ರವೇಶ ಪ್ರಕ್ರಿಯೆಗೆ ಆರಂಭವಾಗಿದೆ. ಪ್ರತಿ ಕೋರ್ಸಗೆ  ಕೇವಲ 60 ವಿದ್ಯಾರ್ಥಿಗಳಿಗೆ ಪ್ರವೇಶ ಅವಕಾಶವಿದೆ.

ಪ್ರವೇಶ ಪಡೆಯಲು ಕನಿಷ್ಟ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.  ಕನಿಷ್ಟ 5 ವರ್ಷಗಳ ಕಾಲ ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿದ 16 ರಿಂದ 35 ವಯೋಮಿತಿ ಒಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೊದಲ ಬಂದವರಿಗೆ ಮೊದಲ ಅವಕಾಶ ನೀಡಲಾಗುವುದು.

ಸಂಸ್ಥೆಯಲ್ಲಿ ಅತ್ಯಾಧುನಿಕ ಪ್ರಾಯೋಗಿಕ ಉಪಕರಣಗಳು ವಿನ್ಯಾಸಕ್ಕೆ ಅಗತ್ಯ ವಿರುವ ತಂತ್ರಾAಶ, ಗಣಕ ಯಂತ್ರ, ಸಿಎನ್‌ಸಿ ಯಂತ್ರಗಳಿವೆ. ವಿದ್ಯಾರ್ಥಿಗಳಿಗೆ ಹಾಗು ಭೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಕ್ಯಾಂಟೀನ್ ವ್ಯವಸ್ಥೆ ಇದೆ. ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ತಾತ್ಕಾಲಿಕ ಹಾಸ್ಟೇಲ್ ವ್ಯವಸ್ಥೆ ಇದೆ.

ಚಿತ್ರದುರ್ಗ ನಗರದಿಂದ ಬಸ್ ಸೌಕರ್ಯವಿದೆ.  ಎಸ್.ಎಸ್.ಎಲ್.ಸಿ. ಬಳಿಕ ವೃತ್ತಿ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯ ಆಧಾರಿತ ಡಿಪ್ಲೊಮಾ ಕೋರ್ಸಗಳಲ್ಲಿ ತರಬೇತಿ ನೀಡಿವುದರೊಂದಿಗೆ ಉದ್ಯೋಗದ ಖಾತರಿ ಸಹ ನೀಡಲಾಗುವುದು. ಮೊದಲ ಮೂರೂ ವರ್ಷಗಳ ಕಾಲ ನಮ್ಮ ಕೇಂದ್ರದಲ್ಲಿ ಸರ್ವಾಂಗೀಣ ತರಬೇತಿ ಕೊಡಲಾಗುವುದು.

ನಾಲ್ಕನೆ ವರ್ಷ ಕಡ್ಡಾಯವಾಗಿ ಕೈಗಾರಿಕಾ ತರಬೇತಿಗಾಗಿ ಕೈಗಾರಿಕೆಗಳಿಗೆ ನಿಯೋಜನೆಗೊಳಿಸಲಾಗುತ್ತದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಸ್ಟೈಫಂಡ್ ನೀಡಲಾಗುತ್ತದೆ. ತರಬೇತಿ ಪಡೆದ ವಿಧ್ಯಾರ್ಥಿಗಳಿಗೆ ಕೈಗಾರಿಕೆ, ಸಾಫ್ಟವೇರ್, ಹಾರ್ಡವೇರ್ ಮತ್ತು ಸರ್ವೀಸ್ ಸೆಕ್ಟರ್‌ಗಳಲ್ಲಿ (ರಾಷ್ಟೀಯ ಮತ್ತು ಬಹುರಾಷ್ಟೀಯ) ಸೇರಲು ಅತ್ಯಧಿಕ ಅವಕಾಶಗಳಿವೆ.  ಉನ್ನತ ವಿದ್ಯಾಭ್ಯಾಸ ಮಾಡಲು ಆಸಕ್ತಿ ಇರುವವರಿಗೆ ನೇರವಾಗಿ ಇಂಜಿನಿಯರಿಂಗ್ ಮೂರನೇ ಸೆಮಿಸ್ಟರಗೆ  ಪ್ರವೇಶ ಪಡೆಯಬಹುದು. ಆಸಕ್ತ ವಿದ್ಯಾರ್ಥಿಗಳು ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಪಡೆದು ದಾಖಲಾತಿ ಪಡೆದು ಕೊಳ್ಳಬೇಕಾಗಿ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ರಸ್ತೆ, ಕಣಿವೆ ಮಾರಮ್ಮ ದೇವಸ್ಥಾನದ ಹಿಂಭಾಗ, ಕುಂಚಿಗನಹಾಳ್ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ ಭೇಟಿ ನೀಡಿಬಹದುದು. ದೂರವಾಣಿ ಸಂಖ್ಯೆ 6362615889, 9826632362, 9481866855 ಗೆ ಸಂಪರ್ಕಿಸಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!